ADVERTISEMENT

ಅತ್ಯಾಚಾರ ಯತ್ನ: ಪೊಲೀಸರ ವಶಕ್ಕೆ ಆರೋಪಿ

​ಪ್ರಜಾವಾಣಿ ವಾರ್ತೆ
Published 4 ಜೂನ್ 2013, 19:35 IST
Last Updated 4 ಜೂನ್ 2013, 19:35 IST

ಬೆಂಗಳೂರು: ಎಂಟು ವರ್ಷದ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಆರೋಪದ ಮೇಲೆ ವಸೀಂ ಎಂಬಾತನನ್ನು ಹೆಣ್ಣೂರು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಅಶ್ವತ್ಥನಗರ ಸಮೀಪದ ಸಾರಾಯಿಪಾಳ್ಯದ ಬಾಲಕಿ, ಸಂಜೆ 6.30ರ ಸುಮಾರಿಗೆ ಮನೆ ಮುಂದೆ ಆಟವಾಡುತ್ತಿದ್ದಳು. ಈ ವೇಳೆ ಪಾನಮತ್ತನಾಗಿ ಅಲ್ಲಿಗೆ ಬಂದ ವಸೀಂ, ನಿರ್ಮಾಣ ಹಂತದಲ್ಲಿರುವ ಕಟ್ಟಡವೊಂದಕ್ಕೆ ಕರೆದೊಯ್ದು ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಈ ವೇಳೆ ಬಾಲಕಿಯ ಚೀರಾಟ ಕೇಳಿ ಸ್ಥಳಕ್ಕೆ ಬಂದ ಸ್ಥಳೀಯರು, ಬಾಲಕಿಯನ್ನು ರಕ್ಷಿಸಿ ಆರೋಪಿಯನ್ನು ಪೊಲೀಸರ ವಶಕ್ಕೆ ಒಪ್ಪಿಸಿದ್ದಾರೆ.

ಬಾಲಕಿಯ ತಂದೆ ಮಟನ್ ಅಂಗಡಿ ಇಟ್ಟುಕೊಂಡಿದ್ದಾರೆ. ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ. ಬಾಲಕಿ ಹಾಗೂ ಆರೋಪಿಗೆ ಬೌರಿಂಗ್ ಆಸ್ಪತ್ರೆಯಲ್ಲಿ ವೈದ್ಯಕೀಯ ತಪಾಸಣೆಗೆ ಒಳಪಡಿಸಲಾಗಿದೆ. ವರದಿ ಬಂದ ನಂತರ ಅತ್ಯಾಚಾರ ನಡೆದಿದೆಯೇ ಎಂಬುದು ಗೊತ್ತಾಗಲಿದೆ ಎಂದು ಹೆಣ್ಣೂರು ಪೊಲೀಸರು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.