ADVERTISEMENT

ಅಧಿಕಾರಕ್ಕಾಗಿ ಜಾತಿ ವಿಭಜನೆ

​ಪ್ರಜಾವಾಣಿ ವಾರ್ತೆ
Published 22 ಜುಲೈ 2012, 19:30 IST
Last Updated 22 ಜುಲೈ 2012, 19:30 IST

ಬೆಂಗಳೂರು: `ರಾಜಕೀಯ ಪಕ್ಷಗಳು ಅಧಿಕಾರಕ್ಕಾಗಿ ಜಾತಿಗಳನ್ನು ವಿಭಜನೆ ಮಾಡಿ ಸಮಾಜದ ಸ್ಥಾಸ್ಥ್ಯ ಕೆಡಿಸುತ್ತಿವೆ~ ಎಂದು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಪುಂಡಲೀಕ ಹಾಲಂಬಿ ಕಿಡಿಕಾರಿದರು.

ವಿಜಯನಗರ ವಿಪ್ರವೃಂದದ ಆಶ್ರಯದಲ್ಲಿ ಆದಿಚುಂಚನಗಿರಿ ಸಮುದಾಯ ಭವನದಲ್ಲಿ ಇತ್ತೀಚೆಗೆ ನಡೆದ ವಿಪ್ರ ಜಾಗೃತಿ ಸಮಾವೇಶದಲ್ಲಿ ಅವರು ಮಾತನಾಡಿದರು.

`ಬ್ರಾಹ್ಮಣ ಸಂಘಟನೆಗಳು ತಮ್ಮ ಚಟುವಟಿಕೆಯನ್ನು ಧಾರ್ಮಿಕ ಕಾರ್ಯಕ್ರಮಗಳಿಗೆ ಸೀಮಿತ ಮಾಡಬಾರದು. ಜಾತ್ಯತೀತ ಮನೋಭಾವ ಬೆಳೆಸಿಕೊಂಡು ಸಂಕಷ್ಟದಲ್ಲಿರುವವವರ ನೋವಿಗೆ ಸ್ಪಂದಿಸಬೇಕು~ ಎಂದು ಅವರು ಕಿವಿಮಾತು ಹೇಳಿದರು.

ಶಾಸಕ ದಿನೇಶ್ ಗುಂಡೂರಾವ್, ಇಸ್ಕಾನ್‌ನ ತಿರು ಪ್ರಭು, ಕರ್ನಾಟಕ ಬ್ರಾಹ್ಮಣ ಮಹಾಸಭಾ ಅಧ್ಯಕ್ಷ ಬಿ.ಎನ್.ವಿ. ಸುಬ್ರಹ್ಮಣ್ಯ, ವಿಜಯನಗರ ವಿಪ್ರ ವೃಂದದ ಅಧ್ಯಕ್ಷ ಅಶ್ವತ್ಥನಾರಾಯಣ್ ಇದ್ದರು. ಸಮಾರೋಪದಲ್ಲಿ ಶಾಸಕ ಎಂ.ಕೃಷ್ಣಪ್ಪ, ಬೆಂಗಳೂರು ದೂರದರ್ಶನ ಕೇಂದ್ರದ ಉಪಮಹಾನಿರ್ದೇಶಕ ಮಹೇಶ್ ಜೋಷಿ ಇತರರು ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.