ADVERTISEMENT

ಅನಧಿಕೃತ ಕಟ್ಟದ ತೆರವು

​ಪ್ರಜಾವಾಣಿ ವಾರ್ತೆ
Published 9 ಆಗಸ್ಟ್ 2012, 19:30 IST
Last Updated 9 ಆಗಸ್ಟ್ 2012, 19:30 IST

ಬೆಂಗಳೂರು: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು ಅನಧಿಕೃತ ಕಟ್ಟಡ ತೆರವು ಕಾರ್ಯಾಚರಣೆಯನ್ನು ಮುಂದುವರೆಸಿದ್ದು, ಇತ್ತೀಚೆಗೆ ದಕ್ಷಿಣ ತಾಲ್ಲೂಕಿನ ಉತ್ತರ ಹಳ್ಳಿಯ ತಲಘಟ್ಟಪುರ ಗ್ರಾಮದಲ್ಲಿ 6 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ವಶಪಡಿಸಿಕೊಂಡಿದೆ.

ತಲಘಟ್ಟಪುರ ಗ್ರಾಮದ ಸರ್ವೆ ನಂ. 16/5ರಲ್ಲಿ ಅನಧಿಕೃತವಾಗಿ ಒಂದು ಆರ್.ಸಿ.ಸಿ. ಕಟ್ಟಡ, ಎರಡು ಎಸಿ ಶೀಟ್‌ನ ಶೆಡ್‌ಗಳನ್ನು ತೆರವುಗೊಳಿಸಿ ಪ್ರಾಧಿಕಾರಕ್ಕೆ ಸೇರಿದ 1ಎಕರೆ 18 ಗುಂಟೆ ಪ್ರದೇಶದ ಆಸ್ತಿಯನ್ನು ವಶಕ್ಕೆ ತೆಗೆದುಕೊಂಡು ಆಸ್ತಿಗೆ ತಂತಿ ಬೇಲಿಯನ್ನು ಅಳವಡಿಸಲಾಗಿದೆ.

ಸ್ಥಳೀಯ ಪೊಲೀಸ್ ಸಿಬ್ಬಂದಿಯ ನೆರವಿನೊಂದಿಗೆ ಬಿಡಿಎ ಸಿಬ್ಬಂದಿ ಕಾರ್ಯಾಚಾರಣೆ ನಡೆಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.