ADVERTISEMENT

ಅನುಗ್ರಹದಲ್ಲಿ ವಾಸ್ತು ದೋಷ!

​ಪ್ರಜಾವಾಣಿ ವಾರ್ತೆ
Published 20 ಮೇ 2018, 19:30 IST
Last Updated 20 ಮೇ 2018, 19:30 IST
ಅನುಗ್ರಹದಲ್ಲಿ ವಾಸ್ತು ದೋಷ!
ಅನುಗ್ರಹದಲ್ಲಿ ವಾಸ್ತು ದೋಷ!   

ಬೆಂಗಳೂರು: ವಾಸ್ತು ಸರಿಯಿಲ್ಲ ಎಂಬ ಕಾರಣಕ್ಕೆ ನಿಯೋಜಿತ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯವರ ಅಧಿಕೃತ ನಿವಾಸ ’ಅನುಗ್ರಹ’ದಲ್ಲಿ ತಂಗಲು ಹಿಂದೇಟು ಹಾಕುತ್ತಿದ್ದಾರೆ ಎಂದು ಗೊತ್ತಾಗಿದೆ.

ಅನುಗ್ರಹದಲ್ಲಿ ವಾಸ್ತು ಸರಿಯಿಲ್ಲ ಎಂದು ವಾಸ್ತು ತಜ್ಞರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಇದರಿಂದ ಏಳಿಗೆಗೆ ತೊಂದರೆಯಾಗಲಿ. ಹೀಗಾಗಿ ಈ ಮನೆಯಲ್ಲಿ ವಾಸ್ತವ್ಯ ಮಾಡದಿರುವುದು ಉತ್ತಮ ಎಂದೂ ಅವರು ಸಲಹೆ ನೀಡಿದ್ದಾರೆ.

ಮುಖ್ಯಮಂತ್ರಿ, ಮಂತ್ರಿಯಾದವರು ಅನುಗ್ರಹದಲ್ಲಿ ನೆಲೆಸಿದರೆ ಅಧಿಕಾರ ಕಳೆದುಕೊಳ್ಳುತ್ತಾರೆ ಎಂಬ ನಂಬಿಕೆ ಇದೆ. ಹೀಗಾಗಿ ಮುಖ್ಯಮಂತ್ರಿಯಾದವರು ’ಕಾವೇರಿ’ ಅಥವಾ ’ಕೃಷ್ಣ’ದಲ್ಲಿ ತಂಗಲು ಇಷ್ಟಪಡುತ್ತಾರೆ ಎಂದು ಮೂಲಗಳು ತಿಳಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT