ಬೆಂಗಳೂರು: ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಅಭಿವೃದ್ಧಿಗಾಗಿ ಬಜೆಟ್ನಲ್ಲಿ ಮೀಸಲಿಟ್ಟ ಅನುದಾನವನ್ನು ಸಮರ್ಪಕವಾಗಿ ಸದ್ಬಳಕೆ ಮಾಡುವುದು ಸೇರಿದಂತೆ ಹಲವು ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಅಂಬೇಡ್ಕರ್ ಯುವಸೇನೆ ಇದೇ 17ರಂದು ಪುರಭವನದ ಎದುರು ಬೃಹತ್ ತಮಟೆ ಚಳವಳಿ ಹಮ್ಮಿಕೊಂಡಿದೆ.
ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸೇನೆಯ ಅಧ್ಯಕ್ಷ ಎಚ್. ಕೋದಂಡರಾಮ, ಪರಿಶಿಷ್ಟ ಜಾತಿ ಮತ್ತು ಪಂಗಡದವರಿಗಾಗಿ ಬಜೆಟ್ನಲ್ಲಿ ಮೀಸಲಿಡುವ ಹಣ ಪ್ರತಿ ವರ್ಷವೂ ಅನ್ಯ ಕಾರ್ಯಗಳಿಗೆ ಬಳಕೆಯಾಗುತ್ತಿದೆ. ಕಾರ್ಯಕ್ರಮಗಳ ಅನುಷ್ಠಾನದಲ್ಲಿ ಅಧಿಕಾರಿಗಳು ಜವಾಬ್ದಾರಿ ವಹಿಸುತ್ತಿಲ್ಲ. ಬೇಜವಾಬ್ದಾರಿ ಅಧಿಕಾರಿಗಳು ಎಚ್ಚೆತ್ತುಕೊಳ್ಳಬೇಕೆಂಬುದು ಈ ಚಳುವಳಿ ಉದ್ದೇಶ ಎಂದರು.
ಜತೆಗೆ ರಾಜ್ಯದಲ್ಲಿ ನಕಲಿ ಜಾತಿ ಪ್ರಮಾಣಪತ್ರಗಳ ಹಾವಳಿ ಹೆಚ್ಚಾಗುತ್ತಿದೆ. ಇದರಿಂದಾಗಿ ಪರಿಶಿಷ್ಟ ಜಾತಿ ಮತ್ತು ಪಂಗಡದವರು ಸರ್ಕಾರದ ಸವಲತ್ತುಗಳಿಂದ ವಂಚಿತರಾಗುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ದಲಿತ ವಿರೋಧಿ ನೀತಿ ಪಾಲಿಸುತ್ತಿರುವ ರಾಜ್ಯ ಸರ್ಕಾರ ಅದನ್ನು ಕೈಬಿಟ್ಟು ಕೂಡಲೇ ಎಲ್ಲ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಅವರು ಇದೇ ಸಂದರ್ಭದಲ್ಲಿ ಒತ್ತಾಯಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.