ADVERTISEMENT

ಅಪಘಾತ: ಬೈಕ್ ಸವಾರ ಸಾವು

​ಪ್ರಜಾವಾಣಿ ವಾರ್ತೆ
Published 7 ಏಪ್ರಿಲ್ 2013, 20:14 IST
Last Updated 7 ಏಪ್ರಿಲ್ 2013, 20:14 IST

ಹೊಸಕೋಟೆ: ಹೆದ್ದಾರಿಯ ಕೋಲಾರ ರಸ್ತೆಯಲ್ಲಿ ಬೈಕ್ ಹಾಗೂ ಟಾಟಾ ಸುಮೊ ನಡುವೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ವ್ಯಕ್ತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಶನಿವಾರ ರಾತ್ರಿ ನಡೆದಿದೆ.

ತಾಲ್ಲೂಕಿನ ಕಂಬಳೀಪುರ ಗ್ರಾಮದ ಕೃಷ್ಣಪ್ಪ (35) ಮೃತಪಟ್ಟ ವ್ಯಕ್ತಿ.

ಹೊಸಕೋಟೆಯಿಂದ ಬೈಕ್‌ನಲ್ಲಿ ಹೋಗುತ್ತಿದ್ದ ಅವರು ಎಂವಿಜೆ ಆಸ್ಪತ್ರೆ ಬಳಿ ತಿರುವು ತೆಗೆದುಕೊಳ್ಳುತ್ತಿದ್ದಾಗ ಎದುರುಗಡೆಯಿಂದ ಬಂದ ಟಾಟಾಸುಮೊ ಡಿಕ್ಕಿ ಹೊಡೆದಿದೆ.  ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.