ADVERTISEMENT

ಅಪಘಾತ: ಲಾರಿಗೆ ಬೆಂಕಿ

​ಪ್ರಜಾವಾಣಿ ವಾರ್ತೆ
Published 26 ಫೆಬ್ರುವರಿ 2011, 19:25 IST
Last Updated 26 ಫೆಬ್ರುವರಿ 2011, 19:25 IST

ನೆಲಮಂಗಲ: ರಾಷ್ಟ್ರೀಯ ಹೆದ್ದಾರಿ 4ರ ಕುಣಿಗಲ್ ವೃತ್ತದ ಬಳಿ ಶುಕ್ರವಾರ ರಾತ್ರಿ 10 ಗಂಟೆ ಸುಮಾರಿನಲ್ಲಿ ಎರಡು ಲಾರಿಗಳು ಪರಸ್ಪರ ಡಿಕ್ಕಿಯಾಗಿ ಬೆಂಕಿ ಹೊತ್ತಿಕೊಂಡು ಒಂದು ಲಾರಿಯಲ್ಲಿದ್ದ ಸುಮಾರು 25 ಲಕ್ಷ ರೂ. ಮೌಲ್ಯದ ವಸ್ತುಗಳು ಭಸ್ಮವಾಗಿವೆ.

ಬೆಂಗಳೂರು ಕಡೆಯಿಂದ ಬರುತ್ತಿದ್ದ ವಿಆರ್‌ಎಲ್ ಲಾರಿಗೆ ಕುಣಿಗಲ್ ಕಡೆಯಿಂದ ಬಂದ  ಲಾರಿಯು ಡಿಕ್ಕಿ ಹೊಡೆಯಿತು. ಪರಿಣಾಮ ವಿಆರ್‌ಎಲ್ ಲಾರಿಯು ಮೇಲ್ಸೇತುವೆಯ ತಡೆಗೋಡೆಗೆ ಹೊಡೆದು ಬೆಂಕಿ ಹೊತ್ತಿಕೊಂಡಿತು.

ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ಸುದ್ದಿ ತಿಳಿದ ಕೂಡಲೇ ಅಗ್ನಿಶಾಮಕ ದಳದ ಸಿಬ್ಬಂದಿ ಧಾವಿಸಿ ಬಂದು ಬೆಂಕಿಯನ್ನು ನಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.