ಬೆಂಗಳೂರು: ಕೋಶಿಸ್ ಕಾಲೇಜಿನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪಿ.ಹರಿಂದ್ರನ್ (48) ಅವರು ಭಾನುವಾರ ರಾತ್ರಿ ನಗರದಲ್ಲಿ ಸಂಭವಿಸಿದ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ.
ನಗರದ ಹೆಣ್ಣೂರು ರಸ್ತೆಯಲ್ಲಿರುವ ಅವರ ನಿವಾಸದ ಬಳಿ ಈ ದುರ್ಘಟನೆ ಸಂಭವಿಸಿದೆ. ರಾತ್ರಿ 7.30ಕ್ಕೆ ಮನೆ ಬಳಿ ಕಾರು ನಿಲ್ಲಿಸಿ ಕೆಳಗೆ ಇಳಿತ್ತಿದ್ದಾಗ ವೇಗವಾಗಿ ಬಂದ ಕಾರು ಅವರಿಗೆ ಡಿಕ್ಕಿ ಹೊಡೆಯಿತು. ಗಾಯಗೊಂಡ ಅವರನ್ನು ಆಸ್ಪತ್ರೆಗೆ ಸಾಗಿಸುವಾಗ ಮಾರ್ಗಮಧ್ಯೆ ಮೃತಪಟ್ಟರು. ಚಿಕ್ಕಜಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.