ADVERTISEMENT

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ: ಬಂಧನ

​ಪ್ರಜಾವಾಣಿ ವಾರ್ತೆ
Published 23 ಜೂನ್ 2012, 19:10 IST
Last Updated 23 ಜೂನ್ 2012, 19:10 IST

ಹೊಸಕೋಟೆ: ಅಪ್ರಾಪ್ತ ವಯಸ್ಸಿನ ಬಾಲಕಿಯೊಬ್ಬಳನ್ನು ಅಪಹರಿಸಿ ನಂತರ ಮದುವೆಯಾಗುವುದಾಗಿ ನಂಬಿಸಿ ಆಕೆಯ ಮೇಲೆ ಅತ್ಯಾಚಾರ ವೆಸಗಿದ ಆರೋಪದ ಮೇರೆ ಪೊಲೀಸರು ಯುವಕನೊಬ್ಬನನ್ನು ಬಂಧಿಸಿ ಶುಕ್ರವಾರ ನ್ಯಾಯಾಲಯಕ್ಕೆ ಹಾಜರು ಪಡಿಸಿದರು.

ರಾಯಚೂರು ಮೂಲದ ಬಸವರಾಜು (23) ಬಂಧಿತ ಆರೋಪಿ. ವಿದ್ಯಾರಣ್ಯಪುರದ ಬಳಿಯ ತಿಂಡ್ಲು ಗ್ರಾಮದಲ್ಲಿ ವಾಸವಾಗಿದ್ದ ಬಸವರಾಜು ಕಾರು ಚಾಲಕನಾಗಿ ಕೆಲಸ ಮಾಡುತ್ತಿದ್ದ.

ಆತ ಮನೆಯ ಪಕ್ಕದ ಯುವತಿಯೊಬ್ಬಳ ಜೊತೆ ಸ್ನೇಹ ಬೆಳಸಿದ. ಅದರಂತೆ ಮೇ.9 ರಂದು ಯುವತಿ ತನ್ನ ಸಂಬಂಧಿಕರ ಮನೆ ಮದುವೆ ಕಾರ್ಯದಲ್ಲಿ ಭಾಗವಹಿಸಲು ಬಿದರಹಳ್ಳಿ ಗ್ರಾಮಕ್ಕೆ ಬಂದಿದ್ದಳು. ಅಲ್ಲಿ ಯವತಿಯನ್ನು ಅಪಹರಿಸಿದ ಬಸವರಾಜು ಆಕೆಯನ್ನು ರಾಯಚೂರು ಜಿಲ್ಲೆಯ ಗಲಿಗ ಗ್ರಾಮದ ತನ್ನ ದೊಡ್ಡಮ್ಮನ ಮನೆಗೆ ಕರೆದೋಯ್ದಿದ್ದ.

ಮಗಳು ಕಾಣೆಯಾದ ಬಗ್ಗೆ ತಾಯಿ ಗೌರಮ್ಮ ಆವಲಹಳ್ಳಿ ಪೊಲೀಸರಿಗೆ ದೂರು ನೀಡಿದ್ದರು. ಕಾರ್ಯಪ್ರವೃತ್ತರಾದ ಪೊಲೀಸರು ಆರೋಪಿಯನ್ನು ಬಂಧಿಸಿ ಯುವತಿಯನ್ನು ರಕ್ಷಿಸುವಲ್ಲಿ ಯಶಸ್ವಿಯಾದರು. ಯುವತಿ ಕೊಟ್ಟ ಹೇಳಿಕೆಯನ್ನು ದಾಖಲಿಸಿದ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.
 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.