ಬೆಂಗಳೂರು: ಯಡಿಯೂರು ವಾರ್ಡ್ ನ ನೆಟ್ಟಕಲ್ಲಪ್ಪ ವೃತ್ತದಿಂದ ೨೩ನೇ ಅಡ್ಡರಸ್ತೆ ವರೆಗಿನ ೨ ಕಿ.ಮೀ.ಗಳಷ್ಟು ಉದ್ದದ ಚರಂಡಿ ಮತ್ತು ಪಾದಚಾರಿ ಮಾರ್ಗಗಳ ಅಭಿವೃದ್ಧಿ ಕಾಮಗಾರಿಗೆ ಬುಧವಾರ ವಿಧಾನಸಭೆ ವಿರೋಧಪಕ್ಷದ ಉಪನಾಯಕ ಆರ್. ಅಶೋಕ ಚಾಲನೆ ನೀಡಿದರು.
ಬಿಬಿಎಂಪಿಯ ಬೃಹತ್ ಕಾಮಗಾರಿಗಳ ಇಲಾಖೆಯಿಂದ ಈ ಕಾಮಗಾರಿಗಳಿಗೆ ಅನುಮೋದನೆ ದೊರೆತಿದ್ದು, ₨ 3.5 ಕೋಟಿ ಅನುದಾನ ದೊರೆತಿದೆ. ರಸ್ತೆಯನ್ನು ಅಭಿವೃದ್ಧಿಪಡಿಸುವ ಕಾಮಗಾರಿಯೂ ಯೋಜನೆಯಲ್ಲಿ ಸೇರಿದೆ. ‘ಕಾಲಮಿತಿಯಲ್ಲಿ ಕಾಮಗಾರಿಗಳನ್ನು ಪೂರೈಸುವ ಮೂಲಕ ಸಾರ್ವಜನಿಕರಿಗೆ ಹೆಚ್ಚಿನ ತೊಂದರೆ ಆಗದಂತೆ ನೋಡಿಕೊಳ್ಳಬೇಕು’ ಎಂದು ಅಶೋಕ, ಗುತ್ತಿಗೆದಾರರಿಗೆ ಸೂಚನೆ ನೀಡಿದರು.
ಮೇಯರ್ ಬಿ.ಎಸ್. ಸತ್ಯನಾರಾಯಣ, ಪಾಲಿಕೆ ವಾರ್ಡ್ ಮಟ್ಟದ ಸಾರ್ವಜನಿಕ ಕಾಮಗಾರಿ ಸ್ಥಾಯಿ ಸಮಿತಿ ಅಧ್ಯಕ್ಷ ಎ.ಹೆಚ್. ಬಸವರಾಜು, ಸ್ಥಳೀಯ ಸದಸ್ಯ ಎನ್.ಆರ್. ರಮೇಶ್ ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.