ADVERTISEMENT

ಅಭ್ಯರ್ಥಿಗಳ ಆಯ್ಕೆ ಸುಸೂತ್ರ: ಇಬ್ರಾಹಿಂ

​ಪ್ರಜಾವಾಣಿ ವಾರ್ತೆ
Published 1 ಏಪ್ರಿಲ್ 2013, 19:34 IST
Last Updated 1 ಏಪ್ರಿಲ್ 2013, 19:34 IST

ಬೆಂಗಳೂರು: ಕಾಂಗ್ರೆಸ್ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆಯಲ್ಲಿ ಯಾವುದೇ  ಗೊಂದಲ ಇಲ್ಲ. 2-3 ದಿನಗಳಲ್ಲಿ ಅಭ್ಯರ್ಥಿಗಳ ಪಟ್ಟಿ ಪ್ರಕಟವಾಗಲಿದೆ ಎಂದು ಕಾಂಗ್ರೆಸ್ ಚುನಾವಣಾ ಕಾರ್ಯತಂತ್ರ ಸಮಿತಿ ಅಧ್ಯಕ್ಷ ಸಿ.ಎಂ.ಇಬ್ರಾಹಿಂ ಹೇಳಿದರು.

ಪತ್ರಕರ್ತರ ಜೊತೆ ಮಾತನಾಡಿದ ಅವರು, `ಅಭ್ಯರ್ಥಿಗಳ ಆಯ್ಕೆಯಲ್ಲಿ ಗೊಂದಲ ಸೃಷ್ಟಿಯಾಗಿದೆ ಎಂಬುದು ಸತ್ಯಕ್ಕೆ ದೂರವಾದ ಸಂಗತಿ. ರಾಜ್ಯದಲ್ಲಿ ಪಕ್ಷವನ್ನು ಅಧಿಕಾರಕ್ಕೆ ತರುವ ಒಂದೇ ಗುರಿಯೊಂದಿಗೆ ಎಲ್ಲ ಪ್ರಕ್ರಿಯೆಗಳನ್ನೂ ನಡೆಸಲಾಗುತ್ತಿದೆ' ಎಂದರು.

ಟಿಕೆಟ್ ಹಂಚಿಕೆ ಕುರಿತಂತೆ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಮತ್ತು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ನಡುವೆ ಭಿನ್ನಾಭಿಪ್ರಾಯವಿದೆ ಎಂಬುದು ಕೇವಲ ವದಂತಿ ಎಂದರು. `ನಾನು ಸ್ಪರ್ಧಿಸಲು ಬಯಸಿದ್ದೇನೆ. ಟಿಕೆಟ್ ನೀಡುವುದು ಹೈಕಮಾಂಡ್‌ಗೆ ಬಿಟ್ಟ ವಿಷಯ' ಎಂದರು. ಕೆಟ್ಟವರು ಅಧಿಕಾರದಿಂದ ತೊಲಗಬೇಕು, ಒಳ್ಳೆಯವರು ಅಧಿಕಾರಕ್ಕೆ ಬರಬೇಕು ಎಂಬ ಅಭಿಲಾಷೆ ಜನರಲ್ಲಿದೆ. ಪಕ್ಷವನ್ನು ಅಧಿಕಾರಕ್ಕೆ ತರುವ ಮೂಲಕ ಅವರ ಆಶಯ ಈಡೇರಿಸಲಾಗುವುದು ಎಂದು  ಪ್ರತಿಕ್ರಿಯಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.