
ಪ್ರಜಾವಾಣಿ ವಾರ್ತೆಬೆಂಗಳೂರು: ಅಮಾನತ್ ಕೋ–ಆಪರೇಟಿವ್ ಬ್ಯಾಂಕ್ ಅನ್ನು ಬೇರೆ ಬ್ಯಾಂಕ್‌ಗಳ ಜತೆ ವಿಲೀನ ಮಾಡುವುದಕ್ಕೆ ಅವಕಾಶ ನೀಡಬಾರದು ಎಂದು ಕಾಂಗ್ರೆಸ್ ಮುಖಂಡ ಸಿ.ಕೆ.ಜಾಫರ್ ಷರೀಫ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಆಗ್ರಹಪಡಿಸಿದ್ದಾರೆ.
ಷರೀಫ್ ಅವರು ನಿಯೋಗದಲ್ಲಿ ಗುರುವಾರ ರಾತ್ರಿ ಮುಖ್ಯಮಂತ್ರಿಯವರನ್ನು ಭೇಟಿ ಮಾಡಿ ಈ ಸಂಬಂಧ ಮನವಿ ಪತ್ರ ಸಲ್ಲಿಸಿದರು. ಅಮಾನತ್ ಕೋ–ಆಪರೇಟಿವ್ ಬ್ಯಾಂಕ್ ಹಾಗೆಯೇ ಉಳಿಯಬೇಕು. ಅಕ್ರಮಗಳ ಬಗ್ಗೆ ತನಿಖೆ ಆಗಬೇಕು ಎಂದು ಆಗ್ರಹಪಡಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.