ಬೆಂಗಳೂರು: ಭಾರತ ವಿಶ್ವವಿದ್ಯಾಲಯದ ರಾಷ್ಟ್ರೀಯ ಕಾನೂನು ಶಾಲೆಯ (ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿ) ಸಾಮಾಜಿಕ ಹೊರಗುಳಿಯುವಿಕೆ ಮತ್ತು ಒಳಗೊಳ್ಳುವಿಕೆ ನೀತಿಯ ಅಧ್ಯಯನ ಕೇಂದ್ರ ಹಾಗೂ ಅಲೆಮಾರಿ ಬುಡಕಟ್ಟು ಮಹಾಸಭಾದ ಜಂಟಿ ಆಶ್ರಯದಲ್ಲಿ ಈ ತಿಂಗಳ 10ರಂದು `ಅಲೆಮಾರಿ ಬುಡಕಟ್ಟುಗಳಿಗೆ ಸಾಮಾಜಿಕ ನ್ಯಾಯ~ ಕುರಿತು ವಿಚಾರ ಸಂಕಿರಣ ಏರ್ಪಡಿಸಲಾಗಿದೆ.
`ಕರ್ನಾಟಕದಲ್ಲಿ 35ಕ್ಕೂ ಹೆಚ್ಚು ಅಲೆಮಾರಿ ಬುಡಕಟ್ಟುಗಳಿವೆ. ಈ ಬುಡಕಟ್ಟುಗಳು ಅನಕ್ಷರತೆ, ಬಡತನ, ವೇಶ್ಯಾವಾಟಿಕೆ, ಭಿಕ್ಷಾಟನೆ, ಮೂಢನಂಬಿಕೆ, ಕ್ರೌರ್ಯಗಳಿಗೆ ಸಿಲುಕಿ ನರಳುತ್ತಿರುವ ಈ ಬುಡಕಟ್ಟು ಜನರಿಗೆ ವಸತಿ, ಶಿಕ್ಷಣ, ಆಹಾರ ಭದ್ರತೆ ಮತ್ತು ಸಾಮಾಜಿಕ ನ್ಯಾಯ ಮರೀಚಿಕೆಯಾಗಿದೆ. ಶೋಚನೀಯ ಸ್ಥಿತಿಯಲ್ಲಿರುವ ಅಲೆಮಾರಿ ಬುಡಕಟ್ಟುಗಳಿಗೆ ಸಾಂವಿಧಾನಿಕ ಮೀಸಲಾತಿಯ ಸೌಲಭ್ಯಗಳು ಸರಿಯಾಗಿ ಸಿಕ್ಕಿಲ್ಲ. ಈ ಬಗ್ಗೆ ಚರ್ಚಿಸಲಾಗುವುದು~ ಎಂದು ಮಹಾಸಭಾ ಅಧ್ಯಕ್ಷ ಬಾಲಗುರುಮೂರ್ತಿ ತಿಳಿಸಿದ್ದಾರೆ.
`ಕಾನೂನು ಶಾಲೆಯ ಅಂತರರಾಷ್ಟ್ರೀಯ ತರಬೇತಿ ಕೇಂದ್ರದಲ್ಲಿ ನಡೆಯುವ ವಿಚಾರ ಸಂಕಿರಣವನ್ನು ಹೈಕೋರ್ಟ್ ನ್ಯಾಯಮೂರ್ತಿ ನಾಗಮೋಹನದಾಸ್ ಉದ್ಘಾಟಿಸುವರು. ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಮಾಜಿ ಅಧ್ಯಕ್ಷ ಸಿ. ಎಸ್. ದ್ವಾರಕಾನಾಥ್ ಅಧ್ಯಕ್ಷತೆ ವಹಿಸುವರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.