ADVERTISEMENT

ಆಂಧ್ರ ಜವಳಿ ಖಾತೆ ಸಚಿವರ ಭೇಟಿ

​ಪ್ರಜಾವಾಣಿ ವಾರ್ತೆ
Published 21 ಸೆಪ್ಟೆಂಬರ್ 2011, 19:30 IST
Last Updated 21 ಸೆಪ್ಟೆಂಬರ್ 2011, 19:30 IST

ಬೆಂಗಳೂರು: ರಾಜ್ಯದ ನೇಕಾರರಿಗೆ ಶೇ 3ರ ಬಡ್ಡಿ ದರದಲ್ಲಿ ಸಾಲ ನೀಡುವ ಯೋಜನೆ ಕುರಿತು ಆಂಧ್ರಪ್ರದೇಶದ ಜವಳಿ ಸಚಿವ ಡಾ.ಪಿ.ಶಂಕರ್ ರಾವ್ ಮೆಚ್ಚುಗೆ ವ್ಯಕ್ತಪಡಿಸಿದರು.

ರಾಜ್ಯದಲ್ಲಿ ಜವಳಿ, ಸಣ್ಣ ಕೈಗಾರಿಕೆ, ಖಾದಿ ಮತ್ತು ಸಾರ್ವಜನಿಕ ಉದ್ದಿಮೆಗಳ ಬಗ್ಗೆ ಮಾಹಿತಿ ಪಡೆದುಕೊಳ್ಳುವ ಸಲುವಾಗಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ ಅವರನ್ನು ಗೃಹ ಕಚೇರಿ ಕೃಷ್ಣಾದಲ್ಲಿ ರಾವ್ ಬುಧವಾರ ಭೇಟಿ ಮಾಡಿದರು.

ರಾಜ್ಯದಲ್ಲಿ ಜಾರಿಗೆ ತಂದಿರುವ ಸುವರ್ಣ ವಸ್ತ್ರ ನೀತಿ, ಜವಳಿ ಪಾರ್ಕ್, ವಿದ್ಯುತ್ ಕೈಮಗ್ಗ ಮತ್ತು ಅವುಗಳಿಗೆ ನೀಡುವ ವಿದ್ಯುತ್‌ಗೆ ಸಬ್ಸಿಡಿ ಸೇರಿದಂತೆ ಇತರ ಕ್ರಮಗಳ ಬಗ್ಗೆ ಮುಖ್ಯಮಂತ್ರಿಗಳು ಮಾಹಿತಿ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.