ADVERTISEMENT

ಆಗಸ್ಟ್‌ನಲ್ಲಿ ಮಡಿವಾಳ ಸಮುದಾಯದ ರಾಜ್ಯ ಮಟ್ಟದ ಸಮಾವೇಶ

​ಪ್ರಜಾವಾಣಿ ವಾರ್ತೆ
Published 21 ಜುಲೈ 2013, 19:31 IST
Last Updated 21 ಜುಲೈ 2013, 19:31 IST

ಬೆಂಗಳೂರು: `ಮಡಿವಾಳ ಸಮುದಾಯವನ್ನು ಪರಿಶಿಷ್ಟ ಜಾತಿ ವಿಭಾಗಕ್ಕೆ ಸೇರಿಸಬೇಕು ಸೆರಿದಂತೆ ಹಲವು ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಆಗಸ್ಟ್‌ನಲ್ಲಿ ನಗರದಲ್ಲಿ ಮಡಿವಾಳ ಸಮುದಾಯದ ರಾಜ್ಯ ಮಟ್ಟದ ಸಮಾವೇಶವನ್ನು ಹಮ್ಮಿಕೊಳ್ಳಲಾಗುವುದು' ಎಂದು ರಾಜ್ಯ ಮಡಿವಾಳರ ಸಂಘದ ಪ್ರಧಾನ ಕಾರ್ಯದರ್ಶಿ ಪುಟ್ಟರಂಗಯ್ಯ ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮಡಿವಾಳ ಸಮುದಾಯವನ್ನು ಪರಿಶಿಷ್ಟ ಜಾತಿಗೆ ಸೇರಿಸುವ ಕುರಿತು ಹಿಂದಿನ ಸರ್ಕಾರ ಪ್ರೊ.ಅನ್ನಪೂರ್ಣ ಅವರ ನೇತೃತ್ವದಲ್ಲಿ ಆಯೋಗ ರಚಿಸಿತ್ತು. ಆಯೋಗ ವರದಿ  ಸಲ್ಲಿಸಿ ಹಲವು ದಿನಗಳಾದರೂ ಸಮುದಾಯವನ್ನು ಪ.ಜಾ. ಗೆ ಸೇರಿಸುವ ಕುರಿತು ಯಾವುದೇ ಕ್ರಮ ಕೈಗೊಂಡಿಲ್ಲ ಎಂದರು. ಸಂಘದ ಕೇಂದ್ರ ಕಾರ್ಯಕಾರಿ ಸಮಿತಿ ಸಭೆಯಲ್ಲಿ ರಾಜ್ಯ ಘಟಕದ ಅಧ್ಯಕ್ಷರಾಗಿ ಸಿ.ನಂಜಪ್ಪ ಅವರನ್ನು ಆಯ್ಕೆ ಮಾಡಲಾಗಿದೆ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.