ADVERTISEMENT

ಆಗ್ನೇಯ ಶಿಕ್ಷಕರ ಕ್ಷೇತ್ರ: ಬಿಜೆಪಿಯಿಂದ ನಾರಾಯಣಸ್ವಾಮಿ ಕಣಕ್ಕೆ

​ಪ್ರಜಾವಾಣಿ ವಾರ್ತೆ
Published 20 ಮೇ 2018, 19:30 IST
Last Updated 20 ಮೇ 2018, 19:30 IST

ಬೆಂಗಳೂರು: ಆಗ್ನೇಯ ಶಿಕ್ಷಕರ ಕ್ಷೇತ್ರದಿಂದ ಮಾಜಿ ಶಾಸಕ ವೈ.ಎ. ನಾರಾಯಣಸ್ವಾಮಿ ಅವರನ್ನು ಕಣಕ್ಕೆ ಇಳಿಸಲು ಬಿಜೆಪಿ ನಿರ್ಧರಿಸಿದೆ.

ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್‌. ಯಡಿಯೂರಪ್ಪ ನೇತೃತ್ವದಲ್ಲಿ ಭಾನುವಾರ ನಡೆದ ಸಭೆಯಲ್ಲಿ ಈ ಬಗ್ಗೆ ತೀರ್ಮಾನ ತೆಗೆದುಕೊಳ್ಳಲಾಗಿದೆ. ಈ ಮೊದಲು ಲೇಪಾಕ್ಷಿ ಅವರಿಗೆ ಟಿಕೆಟ್‌ ನೀಡಲಾಗಿತ್ತು.

ನಾರಾಯಣಸ್ವಾಮಿ ಅವರು ಎರಡು ಅವಧಿಗೆ ಈ ಕ್ಷೇತ್ರದಿಂದ ಆಯ್ಕೆಯಾಗಿದ್ದರು. ಹೆಬ್ಬಾಳ ಶಾಸಕ ಜಗದೀಶ್‌ ಕುಮಾರ್‌ ನಿಧನದ ನಂತರ 2016ರಲ್ಲಿ ನಡೆದ ಉಪಚುನಾವಣೆಯಲ್ಲಿ ಬಿಜೆಪಿಯಿಂದ ಕಣಕ್ಕೆ ಇಳಿದು ಗೆಲುವು ಸಾಧಿಸಿದ್ದರು. 2018ರ ಚುನಾವಣೆಯಲ್ಲಿ ಕಾಂಗ್ರೆಸ್‌ನ ಬಿ.ಎಸ್‌. ಸುರೇಶ್‌ (ಬೈರತಿ) ವಿರುದ್ಧ ಸೋತಿದ್ದರು.

ADVERTISEMENT

ನಾರಾಯಣಸ್ವಾಮಿ ರಾಜೀನಾಮೆ ಬಳಿಕ ಆಗ್ನೇಯ ಶಿಕ್ಷಕರ ಕ್ಷೇತ್ರಕ್ಕೆ ನಡೆದ ಚುನಾವಣೆಯಲ್ಲಿ ಜೆಡಿಎಸ್‌ನ ರಮೇಶ್‌ಬಾಬು ಗೆಲುವು ಸಾಧಿಸಿದ್ದರು. ಈ ಕ್ಷೇತ್ರ ಸೇರಿದಂತೆ ಆರು ಕ್ಷೇತ್ರಗಳಿಗೆ ಜೂನ್‌ 8ರಂದು ಮತದಾನ ನಡೆಯಲಿದೆ. ರಮೇಶ್‌ಬಾಬು ಅವರಿಗೆ ಜೆಡಿಎಸ್‌ ಮತ್ತೆ ಟಿಕೆಟ್‌ ನೀಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.