ADVERTISEMENT

ಆಟೊ ಚಾಲಕರಿಗೆ ತರಬೇತಿ

​ಪ್ರಜಾವಾಣಿ ವಾರ್ತೆ
Published 13 ಮಾರ್ಚ್ 2012, 19:30 IST
Last Updated 13 ಮಾರ್ಚ್ 2012, 19:30 IST

ಬೆಂಗಳೂರು:  ಆಟೊ ಚಾಲಕರಿಗೆ ಸಂಚಾರ ನಿಯಮಗಳ ಬಗ್ಗೆ ಅರಿವು ಮೂಡಿಸುವ ಸಲುವಾಗಿ ಸಂಚಾರ ಪೊಲೀಸರು ಒಂದು ದಿನದ ತರಬೇತಿ ಕಾರ್ಯಕ್ರಮ ಹಮ್ಮಿಕೊಂಡಿರುವುದಾಗಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತರಬೇತಿ ಪಡೆಯಲು ಇಚ್ಚಿಸುವ ಆಟೊ ಚಾಲಕರು  ತಮ್ಮ ಹೆಸರು, ವಿಳಾಸ ಮತ್ತು ಇತರೆ ವಿವರಗಳನ್ನು ಒಳಗೊಂಡಂತೆ ನಿಗದಿಪಡಿಸಿರುವ ಅರ್ಜಿಯಲ್ಲಿ ಭರ್ತಿ ಮಾಡಬೇಕು.

ಅರ್ಜಿಯನ್ನು ಎಂ.ಜಿ ರಸ್ತೆಯ ಯುಟಿಲಿಟಿ ಕಟ್ಟಡದಲ್ಲಿರುವ ಸಹಾಯಕ ಪೊಲೀಸ್ ಕಮಿಷನರ್ ಕಚೇರಿಯಲ್ಲಿ ನೀಡಬಹುದು.

ADVERTISEMENT

ಅರ್ಜಿ ಸಲ್ಲಿಸಿದ ನಂತರ ತರಬೇತಿ ನೀಡುವ ಸ್ಥಳ ಹಾಗೂ ದಿನಾಂಕವನ್ನು ಪ್ರಕಟಿಸುವುದಾಗಿ ಪೊಲೀಸರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.