ADVERTISEMENT

ಆತ್ಮತೃಪ್ತಿ ಇದೆ: ಸದಾನಂದಗೌಡ

​ಪ್ರಜಾವಾಣಿ ವಾರ್ತೆ
Published 21 ಮಾರ್ಚ್ 2012, 19:30 IST
Last Updated 21 ಮಾರ್ಚ್ 2012, 19:30 IST

ಬೆಂಗಳೂರು: `ರಾಜ್ಯದ ಸರ್ವರನ್ನೂ ತಲುಪಬಲ್ಲ, ಸರ್ವವ್ಯಾಪಿ ಬಜೆಟ್ ಮಂಡಿಸಿದ್ದೇನೆ ಎಂಬ ಆತ್ಮತೃಪ್ತಿ ನನಗಿದೆ~ ಎಂದು ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ ಹೇಳಿದರು.

ಬುಧವಾರ ವಿಧಾನಸಭೆಯಲ್ಲಿ ಬಜೆಟ್ ಮಂಡಿಸಿದ ಬಳಿಕ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, `ರಾಜ್ಯದ ಆರ್ಥಿಕ ಶಿಸ್ತನ್ನು ಕಾಪಾಡಿಕೊಂಡು, ಒಳ್ಳೆಯ ಕೆಲಸ ಮಾಡಿದ್ದೇನೆ ಎನ್ನುವ ಸಮಾಧಾನವೂ ಇದೆ~ ಎಂದರು.

ರಾಜ್ಯದ ಆರ್ಥಿಕ ಸಮೃದ್ಧಿ ಸಾಧಿಸುವ ನಿಟ್ಟಿನಲ್ಲಿ ಇರುವ ಅಗತ್ಯಗಳು, ಅಭಿವೃದ್ಧಿಯ ಫಲ ಸಮಾಜದ ಎಲ್ಲ ಜನರನ್ನೂ ತಲುಪುವಂತಹ ಸಮಗ್ರ ಬೆಳವಣಿಗೆ, ಒಳ್ಳೆಯ ಆಡಳಿತ ಮತ್ತು ತೆರಿಗೆಗಳು ಅಭಿವೃದ್ಧಿಗೆ ಪೂರಕವಾಗಿರಬೇಕು ಎಂಬ ಅಂಶಗಳನ್ನು ಇರಿಸಿಕೊಂಡು ಬಜೆಟ್ ತಯಾರಿ ಆರಂಭಿಸಲಾಗಿತ್ತು. ಅವುಗಳ ಪರಿಧಿಯಲ್ಲೇ ಬಜೆಟ್ ರೂಪಿಸಲಾಗಿದೆ ಎಂದು ಅವರು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.