
ಪ್ರಜಾವಾಣಿ ವಾರ್ತೆಬೆಂಗಳೂರು: ಆನೆ ದಂತದಿಂದ ಮಾಡಿದ ಊರುಗೋಲು ಹಿಡಿದು ನಿಂತಿದ್ದ ವ್ಯಕ್ತಿಯೊಬ್ಬನನ್ನು ಅರಣ್ಯ ದಳದ ಅಧಿಕಾರಿಗಳು ಮಂಗಳವಾರ ಬಂಧಿಸಿದ್ದಾರೆ.
ಮಹಮ್ಮದ್ ಅನ್ಸಾರಿ (35) ಬಂಧಿತ ಆರೋಪಿ. ಅವನು ಆನೆ ದಂತದಿಂದ ಮಾಡಿದ ಊರುಗೋಲು ಹಿಡಿದು ನಗರದ ಆಡುಗೋಡಿ ಬಳಿ ನಿಂತಿದ್ದಾಗ ಅರಣ್ಯ ದಳದ ಅಧಿಕಾರಿಗಳು ಆತನನ್ನು ವಶಕ್ಕೆ ತೆಗೆದುಕೊಂಡು ಅಶೋಕನಗರ ಠಾಣೆಗೆ ಒಪ್ಪಿಸಿದ್ದಾರೆ ಎಂದು ಪೊಲೀಸರು ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.