
ಪ್ರಜಾವಾಣಿ ವಾರ್ತೆ
ಆನೇಕಲ್: ತಮಿಳುನಾಡಿನ ಡೆಂಕಣಿ ಕೋಟೆಯಿಂದ ಬೆಂಗಳೂರಿಗೆ ಸಾಗಿಸುತ್ತಿದ್ದ ಸುಮಾರು 24 ಲಕ್ಷ ರೂ. ಬೆಲೆಬಾಳುವ ಎಂಟು ಆನೆ ದಂತಗಳನ್ನು ಬೆಂಗಳೂರು ಸಿಐಡಿ ಅರಣ್ಯ ಘಟಕದ ಪೊಲೀಸರು ಭಾನುವಾರ ಆನೇಕಲ್‌ನಲ್ಲಿ ವಶಪಡಿಸಿಕೊಂಡು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
ಬಂಧಿತರನ್ನು ನಾಗರಾಜು (31) ಮತ್ತು ಪಾಪರೆಡ್ಡಿ (36) ಎಂದು ಗುರುತಿಸಲಾಗಿದೆ. ತಮಿಳುನಾಡಿನಿಂದ ಕರ್ನಾಟಕಕ್ಕೆ ಆನೆ ದಂತಗಳನ್ನು ಸಾಗಿಸುತ್ತಿದ್ದಾರೆಂಬ ಖಚಿತ ಮಾಹಿತಿ ಮೇರೆಗೆ ಸಿಐಡಿ ಪೊಲೀಸರು ಕಾರ್ಯಚರಣೆ ಕೈಗೊಂಡು ಆನೇಕಲ್‌ನಲ್ಲಿ ಬಲೆ ಬೀಸಿದ್ದರು.
ಆರೋಪಿಗಳು ಆನೇಕಲ್‌ನ ಥಳಿ ರಸ್ತೆಯಲ್ಲಿ ಬ್ಯಾಗ್‌ನಲ್ಲಿ ದಂತಗಳನ್ನು ತುಂಬಿಕೊಂಡು ಸಾಗಿಸುತ್ತಿದ್ದಾಗ ಸಿಐಡಿ ಪೊಲೀಸರಿಗೆ ಸಿಕ್ಕಿ ಬಿದ್ದಿದ್ದಾರೆ. ಆರೋಪಿಗಳಿಂದ ಜೊತೆಗೆ ಎರಡು ಮೊಬೈಲ್‌ಗಳನ್ನು ವಶಪಡಿಸಿಕೊಂಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.