ADVERTISEMENT

ಆಮರಣಾಂತ ಉಪವಾಸ ಅಂತ್ಯ

​ಪ್ರಜಾವಾಣಿ ವಾರ್ತೆ
Published 9 ಏಪ್ರಿಲ್ 2018, 19:19 IST
Last Updated 9 ಏಪ್ರಿಲ್ 2018, 19:19 IST

ಮುಡಿಪು (ದಕ್ಷಿಣ ಕನ್ನಡ): ಕೈರಂಗಳ ಗ್ರಾಮದ ಪುಣ್ಯಕೋಟಿನಗರದ ಅಮೃತಧಾರಾ ಗೋಶಾಲೆಯಿಂದ ದನ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಕ್ಕಾಗಿ ಆಗ್ರಹಿಸಿ 9 ದಿನಗಳಿಂದ ಗೋಶಾಲೆಯ ಮುಖ್ಯಸ್ಥ ಟಿ.ಜಿ.ರಾಜಾರಾಮ್ ಭಟ್ ಅವರ ನೇತೃತ್ವದಲ್ಲಿ ನಡೆಯುತ್ತಿದ್ದ ಆಮರಣಾಂತ ಉಪವಾಸ ಸತ್ಯಾಗ್ರಹ ಜಿಲ್ಲಾಡಳಿತ ನೀಡಿದ ಭರವಸೆಯಂತೆ ಸೋಮವಾರ ರಾತ್ರಿ ಪೇಜಾವರ ಮಠದ ವಿಶ್ವೇಶ ತೀರ್ಥ ಸ್ವಾಮೀಜಿ ಸಮ್ಮುಖದಲ್ಲಿ ಕೊನೆಗೊಂಡಿತು.

ಶನಿವಾರ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ರಾಜಾರಾಮ ಭಟ್ ಅವರು ಆಸ್ಪತ್ರೆಯಲ್ಲೂ ನಿರಶನವನ್ನು ಮುಂದುವರಿಸಿದ್ದರು. ಸೋಮವಾರ ದೇರಳಕಟ್ಟೆಯ ಕೆ.ಎಸ್.ಹೆಗ್ಡೆ ಆಸ್ಪತ್ರೆಗೆ ಭೇಟಿ ನೀಡಿ ರಾಜಾರಾಮ ಭಟ್ ಅವರ ಆರೋಗ್ಯ ವಿಚಾರಿಸಿ ಮಂಗಳೂರು ಪೊಲೀಸ್‌ ಕಮಿಷನರ್ ಟಿ.ಆರ್.ಸುರೇಶ್ ಅವರು ಭಟ್ ಅವರೊಂದಿಗೆ ಮಾತುಕತೆ ನಡೆಸಿ ಗೋ ಹಂತಕರನ್ನು ಶೀಘ್ರವಾಗಿ ಬಂಧಿಸಿ ನ್ಯಾಯವನ್ನು ಒದಗಿಸಿಕೊಡುವ ಭರವಸೆ ನೀಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT