ADVERTISEMENT

ಆಯಂಜಿಯೋಪ್ಲಾಸ್ಟಿ ಕಾರ್ಯಾಗಾರ

​ಪ್ರಜಾವಾಣಿ ವಾರ್ತೆ
Published 6 ಸೆಪ್ಟೆಂಬರ್ 2011, 19:30 IST
Last Updated 6 ಸೆಪ್ಟೆಂಬರ್ 2011, 19:30 IST

ಬೆಂಗಳೂರು:  ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆ ವತಿಯಿಂದ ಇಂಡೋ ಅಮೆರಿಕನ್ ಆಯಂಜಿಯೋಪ್ಲಾಸ್ಟಿ ಕಾರ್ಯಾಗಾರ ಹಮ್ಮಿಕೊಂಡಿದ್ದು, ಕಾರ್ಯಾಗಾರದಲ್ಲಿ ಬಡ ಹೃದ್ರೋಗಿಗಳಿಗೆ ಉಚಿತವಾಗಿ ಸ್ಟೆಂಟ್ ಸಾಧನ ಅಳವಡಿಸಲಾಗುತ್ತದೆ ಎಂದು ಸಂಸ್ಥೆಯ ನಿರ್ದೇಶಕ ಡಾ.ಸಿ.ಎನ್.ಮಂಜುನಾಥ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಆರ್ಥಿಕವಾಗಿ ಸಶಕ್ತರಲ್ಲದ 200 ಹೃದ್ರೋಗಿಗಳಿಗೆ ಹಾಗೂ ಬಡತನ ರೇಖೆಗಿಂತ ಕೆಳಗಿರುವ ಹಿರಿಯ ನಾಗರಿಕರಿಗೆ ಸುಮಾರು 50 ಸಾವಿರದಿಂದ ಒಂದು ಲಕ್ಷ ರೂಪಾಯಿವರೆಗಿನ ಸ್ಟೆಂಟ್ ಸಾಧನವನ್ನು ಉಚಿತವಾಗಿ ಅಳವಡಿಸಲಾಗುತ್ತದೆ. ಆಯಂಜಿಯೋಗ್ರಾಮ್ ತಪಾಸಣೆಗೆ ಒಳಪಟ್ಟಿರುವ ಹೃದ್ರೋಗಿಗಳು ಈ ಸೌಲಭ್ಯವನ್ನು ಪಡೆದುಕೊಳ್ಳಬಹುದು ಎಂದು ಅವರು ಹೇಳಿದ್ದಾರೆ.

ಅ. 3ರಿಂದ ಆರಂಭವಾಗುವ ಕಾರ್ಯಾಗಾರವು ಆರು ದಿನಗಳ ಕಾಲ ನಡೆಯಲಿದೆ. ಸ್ಟೆಂಟ್ ಸಾಧನದ ಅಗತ್ಯವಿರುವ ರೋಗಿಗಳು ಸೆ.20ರೊಳಗೆ ತಮ್ಮ ಹೆಸರು ನೋಂದಾಯಿಸಿಕೊಳ್ಳಬೇಕು. ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ 080 2297 7422 ಅಥವಾ 2297 7433 ಸಂಪರ್ಕಿಸಬಹುದು.

ವಿಳಾಸ- ನಿರ್ದೇಶಕರ ಕಚೇರಿ, ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆ, ಬನ್ನೇರುಘಟ್ಟ ರಸ್ತೆ, ಜಯನಗರ ಒಂಬತ್ತನೇ ಬ್ಲಾಕ್, ಬೆಂಗಳೂರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.