ADVERTISEMENT

ಆಯುಕ್ತರನ್ನು ಮುಂದುವರಿಸಲು ಆಗ್ರಹ

​ಪ್ರಜಾವಾಣಿ ವಾರ್ತೆ
Published 22 ಜುಲೈ 2013, 19:29 IST
Last Updated 22 ಜುಲೈ 2013, 19:29 IST

ಬೆಂಗಳೂರು: `ಅಂಗವಿಕಲರ ರಾಜ್ಯ ಆಯುಕ್ತರ ಹುದ್ದೆಯು ಅನುಭವಾತ್ಮಕ ಹಾಗೂ ಜವಾಬ್ದಾರಿ ಹೆಚ್ಚಾಗಿರುವುದರಿಂದ ಈಗಿರುವ ಆಯುಕ್ತರನ್ನೇ ಮುಂದುವರೆಸಬೇಕು' ಎಂದು ರಾಷ್ಟ್ರೀಯ ಅಂಗವಿಕಲಂಗ್ ಮಂಚ್‌ನ ರಾಜ್ಯ ಘಟಕದ ಅಧ್ಯಕ್ಷ ಕೆ.ಎನ್.ಸುಧೀಂದ್ರ ಕುಮಾರ್ ಮನವಿ ಮಾಡಿದರು.

ಸೋಮವಾರ ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನೂತನ ಆಯುಕ್ತರನ್ನು ನೇಮಿಸಿದರೆ ಅಂಗವಿಕಲರ ಸಮಸ್ಯೆ ಅರ್ಥಮಾಡಿಕೊಳ್ಳಲು ಸಮಯ ಬೇಕಾಗುತ್ತದೆ. ಆದ್ದರಿಂದ ಈಗಿನ ಆಯುಕ್ತ ಕೆ.ವಿ.ರಾಜಣ್ಣ ಅವರನ್ನೇ ಮತ್ತೊಂದು ಅವಧಿಗೆ ಮುಂದುವರೆಸಬೇಕು ಎಂದು ಒತ್ತಾಯಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.