ADVERTISEMENT

ಆರೋಗ್ಯಶ್ರೀ ಕಾರ್ಡ್ ವಿತರಣೆ

​ಪ್ರಜಾವಾಣಿ ವಾರ್ತೆ
Published 24 ಮಾರ್ಚ್ 2012, 19:30 IST
Last Updated 24 ಮಾರ್ಚ್ 2012, 19:30 IST

ತಲಘಟ್ಟಪುರ: ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಉತ್ತಮ ಆರೋಗ್ಯ ದೊರಕಿಸಿಕೊಡುವ ಉದ್ದೇಶದಿಂದ ಸರ್ಕಾರ ಜಾರಿಗೆ ತಂದಿರುವ `ವಾಜಪೇಯಿ ಆರೋಗ್ಯಶ್ರೀ~ ಕಾರ್ಡ್‌ಗಳನ್ನು ಅರ್ಹರಿಗೆ ತಲುಪಿಸಲು ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಮುಂದಾಗಬೇಕು ಎಂದು ಬೆಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ಎಂ. ಕೃಷ್ಣಪ್ಪ ಕರೆ ನೀಡಿದರು. 

 ಕೋಣನಕುಂಟೆ ಆರ್‌ಬಿಐ ಬಡಾವಣೆಯಲ್ಲಿ ಪಾಲಿಕೆ ವತಿಯಿಂದ ಕಡು ಬಡವರಿಗೆ ವಾಜಪೇಯಿ ಆರೋಗ್ಯಶ್ರೀ ಕಾರ್ಡ್ ವಿತರಿಸಿ ಮಾತನಾಡಿದ ಅವರು ಮಾತನಾಡಿದರು.

ಪಾಲಿಕೆ ಜಂಟಿ ಆಯುಕ್ತ ಶಿವಬಸವಯ್ಯ ಪಾಲಿಕೆ ಸದಸ್ಯರಾದ ವಿಜಯಾ ರಮೇಶ್, ಶಶಿರೇಖಾ ಜಯರಾಮ್, ಓ. ಮಂಜುನಾಥ್, ಉಪ ಆಯುಕ್ತ ರಾಮಶೆಟ್ಟಿಗಾರ್, ಕಾರ್ಯನಿರ್ವಾಹಕ ಎಂಜಿನಿಯರ್ ಶ್ರೀಕಂಠೇಗೌಡ, ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್‌ಗಳಾದ ನಿಸಾರ್ ಅಹಮದ್‌ಖಾನ್, ಎಸ್. ವೆಂಕಟೇಶ್ ಮತ್ತಿತರರು ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.