ಬೆಂಗಳೂರು: ಕಚೇರಿಯಿಂದ ಕಚೇರಿಗೆ ಅಲೆಯುವುದನ್ನು ತಪ್ಪಿಸಲು ಆರೋಗ್ಯ ಇಲಾಖೆಯ 43 ಕಚೇರಿಗಳನ್ನು ಒಂದೇ ಸೂರಿನಡಿ ಕಾಣುವ ಅವಕಾಶ. ಇದಕ್ಕಾಗಿ ಮಂಗಳವಾರ `ಆರೋಗ್ಯ ಸೌಧ'ದ ಕಟ್ಟಡ ಶಂಕುಸ್ಥಾಪನೆ.
ಶಂಕುಸ್ಥಾಪನೆ ನೆರವೇರಿಸಿದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಚಿವ ಯು.ಟಿ.ಖಾದರ್, `ಎಪಿಎಲ್ ಕಾರ್ಡ್ ಹೊಂದಿರುವ ಬಡವರಿಗೂ ಸೇರಿದಂತೆ ದುಡಿಯುವ ವರ್ಗಕ್ಕೆ ಆರೋಗ್ಯ ವಿಮೆ ಕಲ್ಪಿಸುವ ಬಗ್ಗೆ ಸರ್ಕಾರ ಚಿಂತನೆ ನಡೆಸಿದೆ ಎಂದು ತಿಳಿಸಿದರು.
ಈವರೆಗೆ ಬಿಪಿಎಲ್ ಕಾರ್ಡ್ ಇರುವವರಿಗೆ ಮಾತ್ರ ಆರೋಗ್ಯ ವಿಮೆಯ ಸವಲತ್ತು ಒದಗಿಸಿದೆ. ಸ್ಥಳೀಯ ಸಂಸ್ಥೆಗಳು ಕೂಡ ಬಜೆಟ್‌ನಲ್ಲಿ ಆರೋಗ್ಯ ಮತ್ತು ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಬೇಕು ಎಂದು ಹೇಳಿದರು.
ಒಂದು ವರ್ಷದೊಳಗಿನ ಮಕ್ಕಳಿಗೆ ಯಾವುದೇ ರೋಗ ರುಜಿನ ಬರೆದಂತೆ ತಡೆಯಲು ಅಗತ್ಯವಾಗಿ ಚುಚ್ಚುಮದ್ದನ್ನು ಹಾಕಿಸಬೇಕು. ಇದಲ್ಲದೇ ಸರ್ಕಾರ 65ವರ್ಷಕ್ಕೂ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ದಂತಪಂಕ್ತಿಯನ್ನು ಉಚಿತವಾಗಿ ನೀಡುವ ಬಗ್ಗೆ ಚಿಂತನೆ ನಡೆಸುತ್ತಿದೆ ಎಂದು ಹೇಳಿದರು.
ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ ಮದನ್‌ಗೋಪಾಲ್, ಸಚಿವ ರಾಮಲಿಂಗಾರೆಡಿ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.