ADVERTISEMENT

ಆರೋಪಿಗಳ ಶೋಧ ತೀವ್ರ

​ಪ್ರಜಾವಾಣಿ ವಾರ್ತೆ
Published 4 ಮಾರ್ಚ್ 2012, 19:40 IST
Last Updated 4 ಮಾರ್ಚ್ 2012, 19:40 IST

ಬೆಂಗಳೂರು: ಪೊಲೀಸರು ಮತ್ತು ಮಾಧ್ಯಮ ಪ್ರತಿನಿಧಿಗಳ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ವಕೀಲರನ್ನು ಬಂಧಿಸಿರುವ ನಗರ ಪೊಲೀಸರು ಉಳಿದ ಆರೋಪಿಗಳ ಶೋಧ ಕಾರ್ಯವನ್ನು ತೀವ್ರಗೊಳಿಸಿದ್ದಾರೆ.

ಪ್ರಕರಣದ ಪ್ರಮುಖ ಆರೋಪಿಗಳು ಪರಾರಿಯಾಗಿದ್ದಾರೆ. ಹಿಂಸಾಚಾರದ ದೃಶ್ಯ ಹಾಗೂ ಛಾಯಾಚಿತ್ರಗಳ ನೆರವಿನಿಂದ ನಿಜವಾದ ಆರೋಪಿಗಳನ್ನು ಪತ್ತೆ ಮಾಡುವ ಕಾರ್ಯ ಮುಂದುವರೆದಿದೆ. ಕೆಲವರನ್ನು ಠಾಣೆಗೆ ಕರೆದುಕೊಂಡು ಬಂದು ಅವರ ಚಹರೆಯನ್ನು ಪರಿಶೀಲಿಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪೊಲೀಸರು ಶನಿವಾರ ಬಂಧಿಸಿದ್ದ ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ಎ.ಪಿ. ರಂಗನಾಥ್, ಅರುಣ್ ನಾಯಕ್, ಸಂತೋಷ್ ಮತ್ತು ಸೋಮೇಶ್ ಅವರನ್ನು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹಕ್ಕೆ ಕಳುಹಿಸಲಾಗಿದೆ. ರಂಗನಾಥ್ ಅವರನ್ನು ಜಯದೇವ ಹೃದ್ರೋಗ ಆಸ್ಪತ್ರೆಯಲ್ಲಿ ಭಾನುವಾರ ತಪಾಸಣೆಗೆ ಒಳಪಡಿಸಲಾಯಿತು. ಆ ನಂತರ ಅವರನ್ನು ಜೈಲಿಗೆ ಕಳುಹಿಸಲಾಯಿತು. ನಾಲ್ವರು ಆರೋಪಿಗಳನ್ನು ಮಾ.16ರ ವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.