ADVERTISEMENT

ಆರೋಪಿ ಸಿ.ಸಿ ಕ್ಯಾಮೆರಾದಲ್ಲಿ ಸೆರೆ

ಅಶ್ವಿನಿ ನಾಚಪ್ಪ ಎಟಿಎಂ ಕಾರ್ಡ್‌ ಕಳವು

​ಪ್ರಜಾವಾಣಿ ವಾರ್ತೆ
Published 4 ಡಿಸೆಂಬರ್ 2013, 19:30 IST
Last Updated 4 ಡಿಸೆಂಬರ್ 2013, 19:30 IST

ಬೆಂಗಳೂರು: ಮಾಜಿ ಅಥ್ಲೀಟ್‌ ಅಶ್ವಿನಿ ನಾಚಪ್ಪ ಅವರ ಎಟಿಎಂ ಕಾರ್ಡ್‌ಗಳನ್ನು ಕಳವು ಮಾಡಿ ₨ 2.40 ಲಕ್ಷ ಡ್ರಾ ಮಾಡಿಕೊಂಡಿದ್ದ ದುಷ್ಕರ್ಮಿಯ ದೃಶ್ಯ ಜಯನಗರ ಮೂರನೇ ಹಂತದ ಮುಖ್ಯರಸ್ತೆಯ  ‘ಯೆಸ್‌’ ಬ್ಯಾಂಕ್‌ ಎಟಿಎಂ ಘಟಕದ ಸಿ.ಸಿ ಟಿ.ವಿ ಕ್ಯಾಮೆರಾದಲ್ಲಿ ದಾಖಲಾಗಿದೆ.

ಜಯನಗರದ ಕಿತ್ತೂರು ರಾಣಿ ಚನ್ನಮ್ಮ ಕ್ರೀಡಾಂಗಣದಲ್ಲಿ ಮಂಗಳವಾರ ಅಶ್ವಿನಿ ನಾಚಪ್ಪ ಅವರ ಎಟಿಎಂ ಕಾರ್ಡ್‌ಗಳನ್ನು ಕಳವು ಮಾಡಿದ್ದ ಕಳ್ಳ, ಆ ಕ್ರೀಡಾಂಗಣದಿಂದ ಸ್ವಲ್ಪ ದೂರದಲ್ಲಿರುವ ಯೆಸ್‌ ಬ್ಯಾಂಕ್‌ನ ಎಟಿಎಂ ಘಟಕದಲ್ಲಿ ಬೆಳಿಗ್ಗೆ 10.14ಕ್ಕೆ ಹಣ ಡ್ರಾ ಮಾಡಿಕೊಂಡಿದ್ದಾನೆ. ಆ ದೃಶ್ಯ ಘಟಕದ ಸಿ.ಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಆ ದೃಶ್ಯಾವಳಿಯ ತುಣುಕನ್ನು ಬ್ಯಾಂಕ್‌ನ ಅಧಿಕಾರಿಗಳಿಂದ ಬುಧವಾರ ಪಡೆದುಕೊಳ್ಳಲಾಗಿದೆ. ಆದರೆ, ಆ ದೃಶ್ಯಾವಳಿಯಲ್ಲಿ ಕಳ್ಳನ ಮುಖ ಸ್ಪಷ್ಟವಾಗಿ ಕಾಣಿಸುತ್ತಿಲ್ಲ ಎಂದು ಪೊಲೀಸರು ಹೇಳಿದ್ದಾರೆ. ಆರೋಪಿಯು ಅಶ್ವಿನಿ ನಾಚಪ್ಪ ಅವರ ಎಟಿಎಂ ಕಾರ್ಡ್‌ಗಳಿಂದ
ಬೇರೆ ಬ್ಯಾಂಕ್‌ಗಳ ಎಟಿಎಂ ಘಟಕಗಳಲ್ಲೂ ಹಲವು ಬಾರಿ ಹಣ ಡ್ರಾ ಮಾಡಿಕೊಂಡಿರುವುದು ತನಿಖೆಯಿಂದ ಗೊತ್ತಾಗಿದೆ.

ಆ ಘಟಕಗಳ ಸಿ.ಸಿ ಕ್ಯಾಮೆರಾದಲ್ಲಿ ದಾಖಲಾಗಿರುವ ಆರೋಪಿಯ ದೃಶ್ಯಾವಳಿಯನ್ನು ನೀಡುವಂತೆ ಬ್ಯಾಂಕ್‌ಗಳಿಗೆ ಸೂಚಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT