ADVERTISEMENT

ಆರ್.ಅಶೋಕ್ ವಿರುದ್ಧದ ಪ್ರಕರಣಕ್ಕೆ ತಡೆ

​ಪ್ರಜಾವಾಣಿ ವಾರ್ತೆ
Published 27 ಮಾರ್ಚ್ 2018, 19:36 IST
Last Updated 27 ಮಾರ್ಚ್ 2018, 19:36 IST

ಬೆಂಗಳೂರು: ಬಗರ್‌ ಹುಕುಂ ಜಮೀನು ಅಕ್ರಮ ಮಂಜೂರು ಪ್ರಕರಣದ ಆರೋಪಿ ಬಿಜೆಪಿ ಮುಖಂಡ ಆರ್‌.ಅಶೋಕ್‌ ವಿರುದ್ಧ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ದಾಖಲಿಸಿರುವ ಎಫ್‌ಐಆರ್‌ಗೆ ಮೇ 30ರವರೆಗೆ ಹೈಕೋರ್ಟ್‌ ತಡೆ ನೀಡಿದೆ.

ಎಫ್‌ಐಆರ್‌ ರದ್ದುಪಡಿಸುವಂತೆ ಕೋರಿ ಅಶೋಕ್‌ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಆರ್‌.ಬಿ.ಬೂದಿಹಾಳ್‌ ಅವರಿದ್ದ ಏಕಸದಸ್ಯ ನ್ಯಾಯಪೀಠ ಮಂಗಳವಾರ ವಿಚಾರಣೆ ನಡೆಸಿ ಮುಂದಿನ ಕ್ರಮಕ್ಕೆ ತಡೆ ನೀಡಿ ಆದೇಶಿಸಿದೆ.

ಪ್ರಕರಣವೇನು?: ‘ಆರ್.ಅಶೋಕ್‌, 1998 ರಿಂದ 2006ರ ಅವಧಿಯವರೆಗೆ ಬೆಂಗಳೂರು ದಕ್ಷಿಣ ತಾಲ್ಲೂಕು ಬಗರ್‌ ಹುಕುಂ ಭೂ ಸಕ್ರಮೀಕರಣ ಸಮಿತಿ ಅಧ್ಯಕ್ಷರಾಗಿದ್ದರು. ಈ ಸಮಯದಲ್ಲಿ ಅವರು ಅನರ್ಹ ಫಲಾನುಭವಿಗಳಿಗೆ ಕಾನೂನು ಬಾಹಿರವಾಗಿ ಜಮೀನು ಮಂಜೂರು ಮಾಡಲು ಸಹಕರಿಸಿದ್ದಾರೆ’ ಎಂದು ಆರೋಪಿಸಿ ಎ.ಆನಂದ ಎಂಬುವರು ಭ್ರಷ್ಟಾಚಾರ ನಿಗ್ರಹ ದಳಕ್ಕೆ ದೂರು ನೀಡಿದ್ದರು.

ADVERTISEMENT

ಈ ದೂರಿನ ಅನ್ವಯ ಎಸಿಬಿ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.