ADVERTISEMENT

ಇಂದಿನಿಂದ ಬೆಳೆ ಸಮೀಕ್ಷೆ

​ಪ್ರಜಾವಾಣಿ ವಾರ್ತೆ
Published 12 ಅಕ್ಟೋಬರ್ 2017, 19:56 IST
Last Updated 12 ಅಕ್ಟೋಬರ್ 2017, 19:56 IST

ಹೊಸಕೋಟೆ: ಮೊಬೈಲ್ ಮೂಲಕ ಮಾಹಿತಿ ತಿಳಿಯುವ ಬೆಳೆ ಸಮೀಕ್ಷೆ ಯೋಜನೆಯ ಪ್ರಕ್ರಿಯೆ ಇದೇ 13ರಿಂದ ತಾಲ್ಲೂಕಿನಲ್ಲಿ ಆರಂಭವಾಗಲಿದೆ ಎಂದು ತಹಶೀಲ್ದಾರ್ ನಾರಾಯಣ ವಿಠಲ್ ಗುರುವಾರ ಇಲ್ಲಿ ತಿಳಿಸಿದರು.

ಇದಕ್ಕಾಗಿ ಹೊಸ ಆ್ಯಪ್ ಸಿದ್ಧಪಡಿಸಲಾಗಿದೆ. ಇಲಾಖೆ ಅಧಿಕಾರಿಗಳು ರೈತರ ಜಮೀನಿಗೆ ಹೋಗಿ 30 ದಿನಗಳಲ್ಲಿ ಮಾಹಿತಿ ಸಂಗ್ರಹಿಸಲಿದ್ದಾರೆ. ರೈತರು ತಮ್ಮ ಆಧಾರ್, ಮೊಬೈಲ್ ಸಂಖ್ಯೆ ಮತ್ತು ಒಪ್ಪಿಗೆ ಪತ್ರ ನೀಡುವ ಮೂಲಕ ಸಹಕಾರ ನೀಡುವಂತೆ ಮನವಿ ಮಾಡಿದರು. ಒಂದು ತಿಂಗಳ ನಂತರ ರೈತರಿಗೆ ಈ ಆ್ಯಪ್ ಉಪಯೋಗ ಸಿಗಲಿದೆ. ರೈತರಿಗೆ ಬೆಳೆ ಪರಿಹಾರ ನೀಡುವಲ್ಲೂ ಇದು ಸಹಕಾರಿಯಾಗಲಿದೆ ಎಂದರು.

ಇತ್ತೀಚಿನ ಮಳೆಯಿಂದ ತಾಲ್ಲೂಕಿನಲ್ಲಿ 33 ಮನೆಗಳಿಗೆ ಹಾನಿಯಾಗಿದೆ. ಪರಿಹಾರ ನೀಡಲು ಕಂದಾಯ ಇಲಾಖೆಗೆ ಮಾಹಿತಿ ಸಲ್ಲಿಸಲಾಗಿದೆ ಎಂದು ತಿಳಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.