
ಪ್ರಜಾವಾಣಿ ವಾರ್ತೆಬೆಂಗಳೂರು: ಪಕ್ಷ ಸಂಘಟನೆ, ಚುನಾವಣಾ ಸಿದ್ಧತೆ ಮತ್ತಿತರ ವಿಷಯಗಳ ಕುರಿತು ಚರ್ಚಿಸಲು ಬಿಜೆಪಿ ರಾಜ್ಯ ಪದಾಧಿಕಾರಿಗಳು ಹಾಗೂ ಬಿಜೆಪಿ ರಾಜ್ಯ ಕಾರ್ಯಕಾರಿ ಸಮಿತಿಯ ಸಭೆಗಳು ಸೋಮವಾರ ನಡೆಯಲಿವೆ.
ನಗರದ ಮಲ್ಲೇಶ್ವರದಲ್ಲಿರುವ ಬಿಜೆಪಿ ರಾಜ್ಯ ಕಚೇರಿಯಲ್ಲಿ ಬೆಳಿಗ್ಗೆ ಪಕ್ಷದ ರಾಜ್ಯ ಪದಾಧಿಕಾರಿಗಳ ಸಭೆ ನಡೆಯಲಿದೆ. ಮಧ್ಯಾಹ್ನ ರಾಜ್ಯ ಕಾರ್ಯಕಾರಿ ಸಮಿತಿ ಸಭೆ ನಡೆಯುತ್ತದೆ. ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಕೆ.ಎಸ್.ಈಶ್ವರಪ್ಪ, ಮುಖ್ಯಮಂತ್ರಿ ಜಗದೀಶ ಶೆಟ್ಟರ್, ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ, ಡಿ.ವಿ.ಸದಾನಂದ ಗೌಡ ಮತ್ತಿತರರು ಸಭೆಯಲ್ಲಿ ಪಾಲ್ಗೊಳ್ಳುವರು.
ಪಕ್ಷ ಸಂಘಟನೆ, ಸದಸ್ಯತ್ವ ನೋಂದಣಿ ಅಭಿಯಾನ, ಮುಖಂಡರ ಪ್ರವಾಸ ಕಾರ್ಯಕ್ರಮಗಳು, ಚುನಾವಣಾ ಪೂರ್ವಸಿದ್ಧತೆಗೆ ಚಾಲನೆ ಮತ್ತಿತರ ವಿಷಯಗಳ ಕುರಿತು ಈ ಸಭೆಗಳಲ್ಲಿ ಚರ್ಚೆ ನಡೆಯುವ ಸಾಧ್ಯತೆ ಇದೆ ಎಂದು ಪಕ್ಷದ ಉನ್ನತ ಮೂಲಗಳು ತಿಳಿಸಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.