ಮಾಗಡಿ: ತಾಲ್ಲೂಕಿನ ಇತಿಹಾಸ ಪ್ರಸಿದ್ಧ ತಿರುಮಲ ರಂಗನಾಥಸ್ವಾಮಿ ಬ್ರಹ್ಮರಥೋತ್ಸವವು ಶನಿವಾರ ಮಧ್ಯಾಹ್ನ 12 ರಿಂದ 1 ಗಂಟೆಯವರೆಗೆ ನಡೆಯಲಿದೆ. ಶನಿವಾರ ಬೆಳಗ್ಗೆ ರಂಗನಾಥಸ್ವಾಮಿ ದೇಗುಲದ ಸಮುಚ್ಚಯದಲ್ಲಿರುವ ಎಲ್ಲಾ ದೇವರಿಗೆ ಅಭಿಷೇಕ ಅಲಂಕಾರ, ಪೂಜೆ ನಡೆಯಲಿದೆ.
ನಂತರ ಉತ್ಸವಮೂರ್ತಿ ರಥಬೀದಿಯ ಸುತ್ತಮುತ್ತ ಇರುವ ಅರವಟಿಕೆಗಳಿಗೆ ಭೇಟಿ ನೀಡಿ ಪೂಜೆ ಸ್ವೀಕರಿಸಿದ ಮೇಲೆ ರಥೋತ್ಸವಕ್ಕೆ ಚಾಲನೆ ನೀಡಲಾಗುವುದು ಎಂದು ತಹಶೀಲ್ದಾರ್ ನಾಗರಾಜು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.