ಯಲಹಂಕ: ದಂಡುಪ್ರದೇಶ ಕನ್ನಡ ಸಂಘಟನೆಗಳ ಒಕ್ಕೂಟವು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದೊಂದಿಗೆ ಡಿ. 21ರಂದು ಕವಿ ಸರ್ವಜ್ಞನ ದಿನಾಚರಣೆ ಕಾರ್ಯಕ್ರಮ ಹಮ್ಮಿಕೊಂಡಿದೆ.
ಕಮ್ಮನಹಳ್ಳಿಯ ಡಾ. ರಾಜ್‌ಕುಮಾರ್ ಉದ್ಯಾನವನದಲ್ಲಿ ಶನಿವಾರ ಸಂಜೆ 6.30ಕ್ಕೆ ಗೃಹಸಚಿವ ಕೆ.ಜೆ.ಜಾರ್ಜ್ ಸಮಾರಂಭ ಉದ್ಘಾಟಿಸಲಿದ್ದಾರೆ. ಸರ್ವಜ್ಞ ಹೊಸವರ್ಷದ ಕ್ಯಾಲೆಂಡರ್‌ಅನ್ನು ಬಿಬಿಎಂಪಿ ಮೇಯರ್ ಬಿ.ಎಸ್.ಸತ್ಯನಾರಾಯಣ ಬಿಡುಗಡೆ ಮಾಡಲಿದ್ದಾರೆ. ಡಾ.ರೋರಿಚ್ ದೇವಿಕಾರಾಣಿ ಎಸ್ಟೇಟ್ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಮನು ಬಳಿಗಾರ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದು, ಒಕ್ಕೂಟದ ಅಧ್ಯಕ್ಷ ಕೆ.ಸಿ.ಜಗನ್ನಾಥರೆಡ್ಡಿ ಅಧ್ಯಕ್ಷತೆ ವಹಿಸಲಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.