ADVERTISEMENT

ಇಟಾಸ್ಕಾ ಎಂ.ಡಿ. ಶ್ರೀನಿವಾಸ್‌ಗೆ ಚಿಕಿತ್ಸೆ

​ಪ್ರಜಾವಾಣಿ ವಾರ್ತೆ
Published 7 ಸೆಪ್ಟೆಂಬರ್ 2011, 19:30 IST
Last Updated 7 ಸೆಪ್ಟೆಂಬರ್ 2011, 19:30 IST

ಬೆಂಗಳೂರು: ಕೆಐಎಡಿಬಿ ಭೂ ಹಗರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿ ನಗರದ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿರುವ ಇಟಾಸ್ಕಾ ಕಂಪೆನಿ ವ್ಯವಸ್ಥಾಪಕ ನಿರ್ದೇಶಕ ಎಸ್.ವಿ.ಶ್ರೀನಿವಾಸ್ ಅವರನ್ನು ಬುಧವಾರ ಬೆಳಿಗ್ಗೆ ನಗರದ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಲಾಯಿತು.

ಶ್ರೀನಿವಾಸ್ ಅವರ ಆರೋಗ್ಯ ತಪಾಸಣೆ ಮಾಡಿದ್ದ ಕಾರಾಗೃಹ ಆಸ್ಪತ್ರೆ ವೈದ್ಯರು ಅವರು ಆಸ್ತಮ ಮತ್ತು ಹೃದಯ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿರುವುದಾಗಿ ಹೇಳಿದ್ದರು. ಅಲ್ಲದೇ ಅವರಿಗೆ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯಲ್ಲಿ ಚಿಕಿತ್ಸೆ ಕೊಡಿಸುವಂತೆ ಸೂಚಿಸಿದ್ದರು.

ಈ ಹಿನ್ನೆಲೆಯಲ್ಲಿ ಅವರನ್ನು ಜಯದೇವ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಲಾಯಿತು ಎಂದು ಕಾರಾಗೃಹ ಅಧಿಕಾರಿಗಳು ತಿಳಿಸಿದ್ದಾರೆ.

`ಶ್ರೀನಿವಾಸ್ ಅವರಿಗೆ ಇಸಿಜಿ ಹಾಗೂ ರಕ್ತ ಪರೀಕ್ಷೆ ಮಾಡಲಾಯಿತು. ಅವರ ಆರೋಗ್ಯ ತಪಾಸಣೆ ಮಾಡಿದ ವೈದ್ಯರು ಶ್ರೀನಿವಾಸ್ ಅವರಿಗೆ ಹೃದಯಕ್ಕೆ ಸಂಬಂಧಿಸಿದ ಯಾವುದೇ ಸಮಸ್ಯೆಗಳು ಇಲ್ಲ. ಆದರೆ ಅವರು ಆಸ್ತಮದಿಂದ ಬಳಲುತ್ತಿದ್ದಾರೆ ಎಂದು ಹೇಳಿದ್ದಾರೆ~ ಎಂದು ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆ ನಿರ್ದೇಶಕ ಡಾ. ಸಿ.ಎನ್.ಮಂಜುನಾಥ್ `ಪ್ರಜಾವಾಣಿ~ಗೆ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.