ADVERTISEMENT

ಇದೇ 25ರಿಂದ ವಿಡಿಯೊ ಚಿತ್ರಣ ತರಬೇತಿ

​ಪ್ರಜಾವಾಣಿ ವಾರ್ತೆ
Published 13 ಜೂನ್ 2012, 19:30 IST
Last Updated 13 ಜೂನ್ 2012, 19:30 IST

ಬೆಂಗಳೂರು: ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆಯು ಯುವಕ ಮತ್ತು ಯುವತಿಯರಿಗಾಗಿ ಸ್ವ ಉದ್ಯೋಗಕ್ಕಾಗಿ ವಿಡಿಯೊ ಚಿತ್ರಣ ತರಬೇತಿಯನ್ನು ಜೂನ್ 25 ರಿಂದ ಜುಲೈ 7 ರವರೆಗೆ ನೃಪತುಂಗ ರಸ್ತೆಯ ಯವನಿಕಾ ಸಭಾಂಗಣದಲ್ಲಿ ಏರ್ಪಡಿಸಿದೆ.

ಆಸಕ್ತರು ತಮ್ಮ ಜನ್ಮ ದಿನಾಂಕದ ದಾಖಲೆ, ಎಸ್ಸೆಸ್ಸೆಲ್ಸಿ ಅಂಕಪಟ್ಟಿಯೊಂದಿಗೆ ಜೂನ್ 20 ರೊಳಗೆ ಸಹಾಯಕ ನಿರ್ದೇಶಕರು, ರಾಜ್ಯ ಯುವ ಕೇಂದ್ರ, ನೃಪತುಂಗ ರಸ್ತೆ ಇವರಲ್ಲಿ ದಾಖಲಿಸಿಕೊಳ್ಳಬೇಕು. ತರಬೇತಿ ಉಚಿತವಾಗಿರುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಮಾಹಿತಿಗೆ-98868 47266 ಅಥವಾ 2221 4911 ಸಂಪರ್ಕಿಸಿ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.