ADVERTISEMENT

ಇನ್ಫೋಸಿಸ್ ಕನೆಕ್ಟಿಂಗ್ ಪ್ರಯೋಗಾಲಯ ಉದ್ಘಾಟನೆ

​ಪ್ರಜಾವಾಣಿ ವಾರ್ತೆ
Published 4 ಏಪ್ರಿಲ್ 2012, 19:30 IST
Last Updated 4 ಏಪ್ರಿಲ್ 2012, 19:30 IST

ಮಹದೇವಪುರ:  `ಇಂದಿನ ಐಟಿ ಉದ್ಯಮ ಯುವ ಪೀಳಿಗೆಯ ಮೇಲೆ ನಿಂತಿದೆ. ಅವರ ಸತತ ಪರಿಶ್ರಮ, ಪ್ರಯತ್ನದಿಂದಾಗಿ ಐಟಿ ಕ್ಷೇತ್ರದಲ್ಲಿ ಭಾರತ ಸಾಕಷ್ಟು ಎತ್ತರಕ್ಕೆ ಬೆಳೆಯುತ್ತಿದೆ~ ಎಂದು ಎಂ.ಜಿ. ಚಾರಿಟೇಬಲ್ ಟ್ರಸ್ಟ್‌ನ ಅಧ್ಯಕ್ಷ ಎಸ್.ಎಂ. ವೆಂಕಟಪತಿ ಅಭಿಪ್ರಾಯಪಟ್ಟರು.

ಕ್ಷೇತ್ರದ ಬಿದರಹಳ್ಳಿ ಗ್ರಾಮದ ಹೊರವಲಯದಲ್ಲಿರುವ ಈಸ್ಟ್ ಪಾಯಿಂಟ್ ಎಂಜಿನಿಯರಿಂಗ್ ಕಾಲೇಜಿನಲ್ಲಿ ಇನ್ಫೋಸಿಸ್ ಕನೆಕ್ಟಿಂಗ್ ಪ್ರಯೋಗಾಲಯ ಉದ್ಘಾಟಿಸಿದ ಬಳಿಕ ಅವರು ಮಾತನಾಡಿದರು.

ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಅನುಕೂಲವಾಗುವ ಹಿನ್ನೆಲೆಯಲ್ಲಿ ಇದೇ ಮೊದಲ ಬಾರಿಗೆ ಇನ್ಫೋಸಿಸ್ ಕನೆಕ್ಟಿಂಗ್ ಪ್ರಯೋಗಾಲಯ ಸ್ಥಾಪಿಸಲಾಗಿದೆ. ಇನ್ಫೋಸಿಸ್ ಕುರಿತಾದ ಎಲ್ಲ ಮಾಹಿತಿಗಳನ್ನು ಇಲ್ಲಿಂದಲೇ ಪಡೆದುಕೊಳ್ಳಬಹುದು ಎಂದು ಅವರು ತಿಳಿಸಿದರು.

ಅಲ್ಲದೆ, ನೇರವಾಗಿ ಇನ್ಫೋಸಿಸ್‌ನೊಂದಿಗೆ ಇಲ್ಲಿಂದಲೇ ಸಂಪರ್ಕ ಹೊಂದಬಹುದು. ಹೀಗೆ ಹತ್ತಾರು ಸೌಲಭ್ಯಗಳು ವಿದ್ಯಾರ್ಥಿಗಳಿಗೆ ಕಾಲೇಜು ಆವರಣದಿಂದಲೇ ಕಲ್ಪಿಸಿಕೊಡುವಂತಹ ಪ್ರಯತ್ನ ಇದಾಗಿದೆ ಎಂದು ಅವರು ತಿಳಿಸಿದರು.

ಇನ್ಫೋಸಿಸ್‌ನ ರಿತೇಶ ಕುಂಬ್ಳೆ, ಎಂ.ಜಿ. ಚಾರಿಟೇಬಲ್ ಟ್ರಸ್ಟ್‌ನ ನಿರ್ದೇಶಕರಾದ ಬಿ.ಐ.ರಮಾದೇವಿ, ಎಸ್.ವಿ. ಪ್ರಮೋದ, ಎಸ್.ವಿ.ರಾಜೀವ, ಪ್ರಾಂಶುಪಾಲರಾದ ಡಾ.ಗಿರಿಧರರೆಡ್ಡಿ, ಡಾ.ಬಿ.ಎಂ.ಸತೀಶ ಹಾಗೂ ಎಂಜಿನಿಯರಿಂಗ್ ವಿದ್ಯಾರ್ಥಿಗಳು ಹಾಜರಿದ್ದರು.
 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.