ಯಲಹಂಕ: ಹೊಲಿಗೆ ಯಂತ್ರದ ಅಂಗಡಿಗಳ ಮಾಲೀಕರಿಗೆ ಕಿರುಕುಳ ನೀಡುತ್ತಿದ್ದಾರೆ ಎನ್ನಲಾದ ಅಮೃತಹಳ್ಳಿ ಠಾಣೆ ಇನ್ಸ್‌ಪೆಕ್ಟರ್ ರತ್ನಾಕರ ಶೆಟ್ಟಿ ಅವರನ್ನು ಕೂಡಲೇ ಬಂಧಿಸಿ ಕಾನೂನು ಕ್ರಮ ಜರುಗಿಸುವಂತೆ ಒತ್ತಾಯಿಸಿ ಡಿವೈಎಫ್‌ಐ ಹಾಗೂ ಜನವಾದಿ ಮಹಿಳಾ ಸಂಘಟನೆ ಸದಸ್ಯರು ಗುರುವಾರ ಅಮೃತಹಳ್ಳಿ ಠಾಣೆ ಎದುರು ಪ್ರತಿಭಟನೆ ನಡೆಸಿದರು.
ಸಂಘಟನೆಯ ರಾಜ್ಯ ಘಟಕದ ಅಧ್ಯಕ್ಷೆ ಗೌರಮ್ಮ, `ರತ್ನಾಕರ ಶೆಟ್ಟಿ ಅವರನ್ನು ಸೇವೆಯಿಂದ ವಜಾಗೊಳಿಸಬೇಕು. ಕೊತ್ತನೂರು ಠಾಣೆ ಇನ್ಸ್‌ಪೆಕ್ಟರ್ ಪುರುಷೋತ್ತಮ್‌ರನ್ನೂ ವಿಚಾರಣೆಗೆ ಒಳಪಡಿಸಬೇಕು. ಬೀಗ ಹಾಕಿಸಿರುವ ಅಂಗಡಿಗಳನ್ನು ಕೂಡಲೇ ತೆರೆಸಬೇಕು~ ಎಂದು ಆಗ್ರಹಿಸಿದರು.
ಡಿವೈಎಫ್‌ಐ ಜಿಲ್ಲಾ ಉಪಾಧ್ಯಕ್ಷ ಎಂ.ನಂಜೇಗೌಡ ಸಂಪಿಗೆಹಳ್ಳಿ ಠಾಣೆ ಇನ್ಸ್‌ಪೆಕ್ಟರ್ ಕೆ.ನಂಜುಂಡೇಗೌಡ ಅವರಿಗೆ ಮನವಿ ಪತ್ರ ಸಲ್ಲಿಸಿದರು. ಪೂರ್ವ ತಾಲ್ಲೂಕು ಘಟಕದ ಅಧ್ಯಕ್ಷ ರವಿಕುಮಾರ್, ಸಿಐಟಿಯು ಕಾರ್ಮಿಕ ಸಂಘಟನೆ ರಾಜ್ಯ ಸಮಿತಿ ಸದಸ್ಯ ಹವಾಲ್ದಾರ್ ಇತರರು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.