ಬೆಂಗಳೂರು: ಕೊಪ್ಪಳ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಸೇರಿದಂತೆ ಇತರ ವಿಚಾರಗಳ ಕುರಿತು ಚರ್ಚಿಸುವ ಸಲುವಾಗಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ಗಡ್ಕರಿ ಅವರು ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಕೆ.ಎಸ್.ಈಶ್ವಪ್ಪಪ ಅವರನ್ನು ದೆಹಲಿಗೆ ಕರೆಸಿಕೊಂಡಿದ್ದಾರೆ.
ಗಡ್ಕರಿ ಅವರ ಸೂಚನೆ ಮೇರೆಗೆ ಈಶ್ವರಪ್ಪ ಅವರು ಬುಧವಾರ ಸಂಜೆಯೇ ದೆಹಲಿಗೆ ತೆರಳಿದರು. ತಡರಾತ್ರಿ ಅವರು ಗಡ್ಕರಿ ಜತೆ ಚರ್ಚೆ ನಡೆಸಿದರು.
ಕೊಪ್ಪಳ ಚುನಾವಣೆಯಲ್ಲಿ ಎಲ್ಲ ನಾಯಕರು ಒಗ್ಗಟ್ಟಾಗಿ ಪ್ರಚಾರ ಮಾಡಬೇಕು. ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಜತೆ ಕರೆದೊಯ್ಯಬೇಕು ಎಂದು ಸಲಹೆ ನೀಡಿದರು ಎನ್ನಲಾಗಿದೆ.
ಮಾಜಿ ಸಚಿವ ಜಿ.ಜನಾರ್ದನ ರೆಡ್ಡಿ ಬಂಧನದ ನಂತರದ ಪರಿಸ್ಥಿತಿ ಮತ್ತು ಅದರ ಪರಿಣಾಮಗಳ ಕುರಿತೂ ಈ ಮುಖಂಡರು ಚರ್ಚಿಸಿದರು ಎಂದು ಗೊತ್ತಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.