ADVERTISEMENT

ಉಚಿತ ಕಣ್ಣಿನ ಶಸ್ತ್ರಚಿಕಿತ್ಸೆ, ಐಒಎಲ್ ಅಳವಡಿಕೆ

​ಪ್ರಜಾವಾಣಿ ವಾರ್ತೆ
Published 16 ಅಕ್ಟೋಬರ್ 2012, 19:10 IST
Last Updated 16 ಅಕ್ಟೋಬರ್ 2012, 19:10 IST

ಯಲಹಂಕ: ಜೆಡಿಎಸ್‌ನ ಥಣಿಸಂದ್ರ ವಾರ್ಡ್ ಘಟಕ ಮತ್ತು ಕೆಂಪೇಗೌಡ ವೈದ್ಯಕೀಯ ಆಸ್ಪತ್ರೆ ಹಾಗೂ ಸಂಶೋಧನಾ ಕೇಂದ್ರದ ಸಂಯುಕ್ತ ಆಶ್ರಯದಲ್ಲಿ ಸಾರಾಯಿಪಾಳ್ಯದ ಸೆಂಟ್ ಜವೇರಿಯ ಆಂಗ್ಲ ಶಾಲೆಯಲ್ಲಿ ಉಚಿತ ಕಣ್ಣಿನ ಪರೀಕ್ಷೆ ಮತ್ತು ಕಣ್ಣಿನ ಪೊರೆಗೆ ಆಧುನಿಕ ಶಸ್ತ್ರಚಿಕಿತ್ಸೆಯ ಮೂಲಕ ಐಒಎಲ್ ಅಳವಡಿಕೆ ಶಿಬಿರ ಏರ್ಪಡಿಸಲಾಗಿತ್ತು.

ಶಿಬಿರದ ಉದ್ಘಾಟನೆ ನೆರವೇರಿಸಿ ಮಾತನಾಡಿದ ಜೆಡಿಎಸ್ ಮುಖಂಡ ಎಂ. ಜಯಗೋಪಾಲಗೌಡ, `ಈ ಭಾಗದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಬಡಜನರು ವಾಸವಾಗಿದ್ದು, ಇವರಿಗೆ ಕಣ್ಣಿನ ಸಮಸ್ಯೆ ಉಂಟಾದರೆ ಚಿಕಿತ್ಸೆ ಪಡೆಯುವ ಶಕ್ತಿ ಇರುವುದಿಲ್ಲ. ಈ ದಿಸೆಯಲ್ಲಿ ಅಂತಹ ಜನರಿಗೆ ಅನುಕೂಲವಾಗಲೆಂದು ಉಚಿತವಾಗಿ ಕಣ್ಣಿನ ತಪಾಸಣೆ ಮತ್ತು ಅಗತ್ಯವಿರುವವರಿಗೆ ಶಸ್ತ್ರಚಿಕಿತ್ಸೆ ನೆರವೇರಿಸಲು ವ್ಯವಸ್ಥೆ ಮಾಡಲಾಗಿದೆ~  ಎಂದರು.

ಬ್ಯಾಟರಾಯನಪುರ ಕ್ಷೇತ್ರದ ಜೆಡಿಎಸ್ ಅಧ್ಯಕ್ಷ ಜೆ.ಎಂ.ಚಂದ್ರಪ್ಪ, ಪ್ರಧಾನ ಕಾರ್ಯದರ್ಶಿ ಎನ್.ವೇಣುಗೋಪಾಲ್, ನಗರ ಘಟಕದ ಪ್ರಧಾನ ಕಾರ್ಯದರ್ಶಿ ಟಿ.ಎನ್.ಚಂದ್ರಶೇಖರಗೌಡ, ಮುಖಂಡರಾದ ಮುಕುಂದ ರಾವ್, ಸಿ. ಜೋಸೆಫ್, ಟಿ.ಎಂ.ಶ್ರೀನಿವಾಸ್, ಎಂ.ಉಮೇಶ್, ಶಾಲೆಯ ಸಂಸ್ಥಾಪಕ ಸೈಯದ್ ಉಬೇದುಲ್ಲಾ ಮೊದಲಾದವರು ಹಾಜರಿದ್ದರು. ಒಟ್ಟು 260 ಮಂದಿ ಶಿಬಿರದ ಪ್ರಯೋಜನ ಪಡೆದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.