ADVERTISEMENT

ಉಚಿತ ನೋಟ್ ಪುಸ್ತಕಗಳ ವಿತರಣೆ

​ಪ್ರಜಾವಾಣಿ ವಾರ್ತೆ
Published 18 ಜೂನ್ 2012, 19:30 IST
Last Updated 18 ಜೂನ್ 2012, 19:30 IST
ಉಚಿತ ನೋಟ್ ಪುಸ್ತಕಗಳ ವಿತರಣೆ
ಉಚಿತ ನೋಟ್ ಪುಸ್ತಕಗಳ ವಿತರಣೆ   

ರಾಜರಾಜೇಶ್ವರಿನಗರ: `ವಿದ್ಯಾರ್ಥಿಗಳು ಕಷ್ಟಪಟ್ಟು ಅಭ್ಯಾಸ ಮಾಡುವ ಮೂಲಕ ಶಿಕ್ಷಣ ಪಡೆದು ರಾಷ್ಟ್ರ ನಿರ್ಮಾಣದಲ್ಲಿ ತೊಡಗಿಸಿಕೊಳ್ಳಬೇಕು~ ಎಂದು ಕರ್ನಾಟಕ ವಸತಿ ಮಹಾಮಂಡಲದ ಅಧ್ಯಕ್ಷ ಎಸ್.ಟಿ.ಸೋಮಶೇಖರ್ ಅವರು ಕರೆ ನೀಡಿದರು.

ಕುಂಬಳಗೋಡು ಸಂತ ಫಿಲೋಮಿನ ಶಾಲೆಯ ಮಕ್ಕಳಿಗೆ ನೋಟ್ ಪುಸ್ತಕಗಳನ್ನು ವಿತರಿಸಿ ಮಾತನಾಡಿದ ಅವರು, `ಯಶವಂತಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸರ್ಕಾರಿ ಮತ್ತು ಖಾಸಗಿ ಶಾಲೆಗಳ ಮಕ್ಕಳಿಗೆ ಸುಮಾರು ಐದು ಲಕ್ಷ ಉಚಿತ ನೋಟ್ ಪುಸ್ತಕಗಳನ್ನು ವಿತರಿಸಲು ಉದ್ದೇಶಿಸಲಾಗಿದೆ~ ಎಂದರು.

ಗಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಪಟೇಲ್ ನರಸೇಗೌಡ, ನಗರಸಭೆ ಮಾಜಿ ಸದಸ್ಯ ಸಿ.ಎಂ.ಸಿ.ಸತ್ಯನಾರಾಯಣ, ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪಿ.ಗಾಂಧಿ, ಗ್ರಾ.ಪಂ. ಅಧ್ಯಕ್ಷ ನಾರಾಯಣಸ್ವಾಮಿ, ಮಾಜಿ ಅಧ್ಯಕ್ಷ ಆರ್. ಲಕ್ಷ್ಮಯ್ಯ, ದೊಡ್ಡಬೆಲೆ  ನಾರಾಯಣಪ್ಪ, ತಾ.ಪಂ. ಸದಸ್ಯಮುನಿ ರಾಜು, ನಗರ ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಎನ್.ದೇವರಾಜು ಮತ್ತಿತರರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.