ADVERTISEMENT

ಉತ್ತರ ತಾಲ್ಲೂಕು ಪಂಚಾಯ್ತಿ ಅಧ್ಯಕ್ಷರಾಗಿ ರಾಮಚಂದ್ರಪ್ಪ ಆಯ್ಕೆ

​ಪ್ರಜಾವಾಣಿ ವಾರ್ತೆ
Published 7 ಮಾರ್ಚ್ 2014, 19:30 IST
Last Updated 7 ಮಾರ್ಚ್ 2014, 19:30 IST

ಯಲಹಂಕ: ಬೆಂಗಳೂರು ಉತ್ತರ ತಾಲ್ಲೂಕು ಪಂಚಾ ಯ್ತಿಯ ನೂತನ ಅಧ್ಯಕ್ಷರಾಗಿ ಶಿವಕೋಟೆ ರಾಮಚಂದ್ರಪ್ಪ ಆಯ್ಕೆಯಾಗಿದ್ದಾರೆ.

ಅಧ್ಯಕ್ಷರ ಸ್ಥಾನಕ್ಕಾಗಿ ಶುಕ್ರವಾರ ನಡೆದ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ರಾಮಚಂದ್ರಪ್ಪ ಹಾಗೂ ಕಾಂಗ್ರೆಸ್‌ ಬೆಂಬಲಿತ ಅಭ್ಯರ್ಥಿ ಹುರಳಿಚಿಕ್ಕನಹಳ್ಳಿ ವೆಂಕಟೇಶ್‌ ಸ್ಪರ್ಧಿಸಿದ್ದರು. ಒಟ್ಟು 22 ಸದಸ್ಯ ಬಲದ ತಾಲ್ಲೂಕು ಪಂಚಾಯ್ತಿಯಲ್ಲಿ ಕಾಂಗ್ರೆಸ್‌ 9, ಬಿಜೆಪಿ 8 ಹಾಗೂ ಜೆಡಿಎಸ್‌ 5 ಸದಸ್ಯರನ್ನು ಹೊಂದಿದೆ.

ಜೆಡಿಎಸ್‌ನ ನಾಲ್ವರು ಸದಸ್ಯರ ಬೆಂಬಲದೊಂದಿಗೆ ರಾಮಚಂದ್ರಪ್ಪ ಅವರು 12 ಮತಗಳನ್ನು ಪಡೆದು ಅಧ್ಯಕ್ಷ ರಾಗಿ ಆಯ್ಕೆಯಾದರು. ವೆಂಕಟೇಶ್‌ 9 ಮತಗಳನ್ನು ಪಡೆದರು. ಒಬ್ಬ ಸದಸ್ಯರು ಚುನಾವಣೆಗೆ ಗೈರು ಹಾಜರಾ ಗಿದ್ದರು.

ಬೆಂಗಳೂರು ಉತ್ತರ ಉಪವಿಭಾ ಗಾಧಿಕಾರಿ ಮಹೇಶ್‌ ಬಾಬು ಚುನಾವಣಾಧಿಕಾರಿಯಾಗಿ ಕಾರ್ಯ ನಿರ್ವ ಹಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.