ADVERTISEMENT

ಉದ್ಯೋಗ ಮೇಳ

​ಪ್ರಜಾವಾಣಿ ವಾರ್ತೆ
Published 10 ಏಪ್ರಿಲ್ 2012, 19:30 IST
Last Updated 10 ಏಪ್ರಿಲ್ 2012, 19:30 IST

ಪೀಣ್ಯ ದಾಸರಹಳ್ಳಿ:  ಸುರಕ್ಷಾ ಚಾರಿಟಬಲ್ ಫೌಂಡೇಷನ್ ವತಿಯಿಂದ ಶುಕ್ರವಾರ (ಏ. 13) ಪೈಪ್‌ಲೈನ್ ರಸ್ತೆಯಲ್ಲಿರುವ ಮಲ್ಲಸಂದ್ರ ಸರ್ಕಾರಿ ಪ್ರಾಥಮಿಕ ಪಾಠ ಶಾಲೆಯ ಆವರಣದಲ್ಲಿ ಬೃಹತ್ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ.

ಮೇಳದಲ್ಲಿ ಸುಮಾರು 70 ಖಾಸಗಿ ಕಂಪನಿಗಳು ಭಾಗವಹಿಸಲಿವೆ. 4ನೇ ತರಗತಿ ಓದಿದವರಿಗೂ ಉದ್ಯೋಗ ಅವಕಾಶಗಳು ಸಿಗಲಿವೆ. ಭಾಗವಹಿಸಲು ಇಚ್ಛಿಸುವ ಅಭ್ಯರ್ಥಿಗಳು ಸ್ವವಿವರಗಳೊಂದಿಗೆ   ಆಗಮಿಸಬೇಕೆಂದು ಸಂಸ್ಥೆ ತಿಳಿಸಿದೆ. ಮಾಹಿತಿಗಾಗಿ 9243819131, 7899775335 ಸಂಪರ್ಕಿಸಬಹುದು.
 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.