ತಲಘಟ್ಟಪುರ: `ರಾಜ್ಯದಲ್ಲಿ ಉನ್ನತ ಶಿಕ್ಷಣ ಪಡೆಯುವವರ ಸಂಖ್ಯೆ ತೀರಾ ಕಡಿಮೆ ಇದೆ. 2020ರ ವೇಳೆಗೆ ಈ ಪ್ರಮಾಣ ಶೇ 30 ಆಗಬೇಕಿದೆ. ಈ ನಿಟ್ಟಿನಲ್ಲಿ ಉನ್ನತ ಶಿಕ್ಷಣ ಕ್ಷೇತ್ರಕ್ಕೆ ಸರ್ಕಾರ ಹೆಚ್ಚಿನ ಉತ್ತೇಜನ ನೀಡಲಿದೆ' ಎಂದು ಉನ್ನತ ಶಿಕ್ಷಣ ಸಚಿವ ಆರ್.ವಿ. ದೇಶಪಾಂಡೆ ಭರವಸೆ ನೀಡಿದರು.
ಕನಕಪುರ ರಸ್ತೆಯ ಎ.ಪಿ.ಎಸ್ ಎಂಜಿನಿಯರಿಂಗ್ ಕಾಲೇಜಿನ ಮೆಕಾನಿಕಲ್ ಮತ್ತು ಸಿವಿಲ್ ಎಂಜಿನಿಯರಿಂಗ್ ವಿಭಾಗಗಳ ಕಟ್ಟಡ ಉದ್ಘಾಟಿಸಿ ಅವರು ಮಾತನಾಡಿದರು.
`ಖಾಸಗಿ ಶಿಕ್ಷಣ ಸಂಸ್ಥೆಗಳು ನಿಸ್ವಾರ್ಥದಿಂದ ಸಮಾಜಸೇವೆ ಮಾಡುವ ಮೂಲಕ ಬಡ ವಿದ್ಯಾರ್ಥಿಗಳಿಗೂ ತಾಂತ್ರಿಕ ಶಿಕ್ಷಣ ಒದಗಿಸಬೇಕು. ಕೇವಲ ಹಣ ಸಂಪಾದನೆಯ ಗುರಿ ಇರಿಸಿಕೊಳ್ಳ ಬಾರದು' ಎಂದು ಅವರು ಕಿವಿಮಾತು ಹೇಳಿದರು.
ಶಾಸಕ ಎಸ್.ಟಿ.ಸೋಮಶೇಖರ್, `ಸುತ್ತಮುತ್ತಲ ಗ್ರಾಮಗಳ ಜನರಿಗೆ ಗುಣಮಟ್ಟದ ಶಿಕ್ಷಣ ದೊರಕಿಸಿ ಕೊಡುವ ಕೆಲಸವನ್ನು ಮಾಡಬೇಕಾಗಿದೆ' ಎಂದರು.
ಜಿಲ್ಲಾ ಪಂಚಾಯ್ತಿ ಮಾಜಿ ಅಧ್ಯಕ್ಷ ಎಂ. ಸದಾನಂದ, ತಾಲ್ಲೂಕು ಪಂಚಾಯ್ತಿ ಉಪಾಧ್ಯಕ್ಷ ಎಂ.ಜಿ. ನಾಗರಾಜು, ಸದಸ್ಯೆ ವಿಜಯಲಕ್ಷ್ಮೀ ಶೇಷಾದ್ರಿ, ಗ್ರಾಮ ಪಂಚಾಯ್ತಿ ಅಧ್ಯಕ್ಷ ಪರಮಶಿವ ಮತ್ತಿತರರು ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.