ADVERTISEMENT

ಉನ್ನತ ಶಿಕ್ಷಣದ ಸಮಸ್ಯೆ ಪರಿಹಾರಕ್ಕೆ ನೆರವು

​ಪ್ರಜಾವಾಣಿ ವಾರ್ತೆ
Published 20 ಏಪ್ರಿಲ್ 2012, 19:05 IST
Last Updated 20 ಏಪ್ರಿಲ್ 2012, 19:05 IST

ಬೆಂಗಳೂರು: `ಉನ್ನತ ಶಿಕ್ಷಣದಲ್ಲಿರುವ ಸಮಸ್ಯೆಗಳನ್ನು ಬಗೆಹರಿಸಲು ಕರ್ನಾಟಕ ರಾಜ್ಯ ವಿಶ್ವವಿದ್ಯಾಲಯಗಳ ನಿವೃತ್ತ ಕುಲಪತಿಗಳ ವೇದಿಕೆಯ ಸಹಕಾರ ಪಡೆಯಲಾಗುವುದು. ಈ ದಿಸೆಯಲ್ಲಿ ಶೀಘ್ರದಲ್ಲೇ ಸಭೆ ಕರೆಯಲಾಗುವುದು~ ಎಂದು ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ ಭರವಸೆ ನೀಡಿದರು.

ಕರ್ನಾಟಕ ರಾಜ್ಯ ವಿಶ್ವವಿದ್ಯಾಲಯಗಳ ನಿವೃತ್ತ ಕುಲಪತಿಗಳ ವೇದಿಕೆಯು ಶುಕ್ರವಾರ ನಗರದಲ್ಲಿ ಹಮ್ಮಿಕೊಂಡಿದ್ದ `ಸ್ವಾಯತ್ತ ಕಾಲೇಜುಗಳ ಸ್ಥಿತಿಗತಿ~ ಕುರಿತ ವಿಚಾರ ಸಂಕಿರಣ ಉದ್ಘಾಟಿಸಿ ಅವರು ಮಾತನಾಡಿದರು.

ವೇದಿಕೆಯ ಅಧ್ಯಕ್ಷ ಡಾ.ಎನ್.ಆರ್.ಶೆಟ್ಟಿ, `ಸಂಸತ್ತಿನಲ್ಲಿ  1979 ರಿಂದೀಚೆಗೆ ಉನ್ನತ ಶಿಕ್ಷಣಕ್ಕೆ ಸಂಬಂಧಪಟ್ಟಂತೆ ಹಲವು ಕಾಯ್ದೆಗಳು ಮಂಡನೆಯಾಗದೇ ಹಾಗೇ ಉಳಿದುಕೊಂಡಿವೆ. ಉನ್ನತ ಶಿಕ್ಷಣಕ್ಕೆ ಸಂಬಂಧಪಟ್ಟಂತೆ ಯಶ್‌ಪಾಲ್ ಸಮಿತಿ ನೀಡಿರುವ ವರದಿ ಅನುಷ್ಠಾನಕ್ಕೆ ಎಂದು ಒತ್ತಾಯಿಸಿದರು.  ಉನ್ನತ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಸಿದ್ಧಯ್ಯ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.