ADVERTISEMENT

ಉಪ ಚುನಾವಣೆ: ಮಧು ಬಂಗಾರಪ್ಪ ಜೆಡಿಎಸ್ ಅಭ್ಯರ್ಥಿ?

​ಪ್ರಜಾವಾಣಿ ವಾರ್ತೆ
Published 18 ಫೆಬ್ರುವರಿ 2012, 19:30 IST
Last Updated 18 ಫೆಬ್ರುವರಿ 2012, 19:30 IST

ಬೆಂಗಳೂರು: ಉಡುಪಿ - ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಜೆಡಿಎಸ್ ಯುವ ಘಟಕದ ಅಧ್ಯಕ್ಷ ಮಧು ಬಂಗಾರಪ್ಪ ಅವರನ್ನು ಕಣಕ್ಕೆ ಇಳಿಸುವ ಕುರಿತು ಜೆಡಿಎಸ್ ಮುಖಂಡರು ಗಂಭೀರ ಚಿಂತನೆ ನಡೆಸಿದ್ದಾರೆ.

ಮಧು ಅವರನ್ನು ಅಭ್ಯರ್ಥಿಯನ್ನಾಗಿ ಕಣಕ್ಕಿಳಿಸುವ ಕುರಿತು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ. ದೇವೇಗೌಡ ಮತ್ತು ರಾಜ್ಯ ಘಟಕದ ಅಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಒಲವು ತೋರಿದ್ದಾರೆ ಎಂದು ತಿಳಿದುಬಂದಿದೆ. ಬಜರಂಗದಳ ತೊರೆದು  ಜೆಡಿಎಸ್‌ಗೆ ಸೇರ್ಪಡೆಯಾಗಿರುವ ಮಹೇಂದ್ರ ಕುಮಾರ್ ಅವರೂ ಅಭ್ಯರ್ಥಿಯಾಗಿ ಕಣಕ್ಕಿಳಿಯುವ ಉತ್ಸಾಹ ಹೊಂದಿದ್ದಾರೆ ಎನ್ನಲಾಗಿದೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಕುಮಾರಸ್ವಾಮಿ, `ಸ್ಥಳೀಯ ಮುಖಂಡರು, ಮಧು ಅವರನ್ನು ಕಣಕ್ಕೆ ಇಳಿಸುವಂತೆ ಒತ್ತಡ ಹೇರುತ್ತಿದ್ದಾರೆ. ಆದರೆ ಅವರು ರಾಜ್ಯ ರಾಜಕಾರಣದಲ್ಲಿಯೇ ಮುಂದುವರಿಯಬೇಕು ಎಂಬುದು ನಮ್ಮ ಅಪೇಕ್ಷೆ ಎಂದರು.

ಒಂದೆರಡು ದಿನಗಳಲ್ಲಿ ಸಭೆ ಸೇರಿ ಅಭ್ಯರ್ಥಿ ಆಯ್ಕೆ ಬಗ್ಗೆ ಅಂತಿಮ ನಿರ್ಧಾರ ತೆಗೆದುಕೊಳ್ಳಲಾಗುವುದು~ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.