ADVERTISEMENT

ಎಂಟು ಶುದ್ಧ ನೀರಿನ ಘಟಕ ಸ್ಥಾಪನೆ

​ಪ್ರಜಾವಾಣಿ ವಾರ್ತೆ
Published 8 ಡಿಸೆಂಬರ್ 2017, 19:30 IST
Last Updated 8 ಡಿಸೆಂಬರ್ 2017, 19:30 IST
ಎಂಟು ಶುದ್ಧ ನೀರಿನ ಘಟಕ ಸ್ಥಾಪನೆ
ಎಂಟು ಶುದ್ಧ ನೀರಿನ ಘಟಕ ಸ್ಥಾಪನೆ   

ಬೆಂಗಳೂರು: ಹುಸ್ಕೂರು ಗ್ರಾಮ ಪಂಚಾಯಿತಿಯ ವ್ಯಾಪ್ತಿಯಲ್ಲಿ ದಾನಿಗಳ ಸಹಾಯದಿಂದ ₹4 ಲಕ್ಷ ವೆಚ್ಚದಲ್ಲಿ ಎಂಟು ಶುದ್ಧ ನೀರಿನ ಘಟಕಗಳನ್ನು ನಿರ್ಮಿಸಲಾಗಿದೆ.

‘ಅನೇಕ ಗ್ರಾಮಗಳಲ್ಲಿ ಕುಡಿಯುವ ನೀರಿನ ಅಭಾವ ಇದ್ದಿದ್ದರಿಂದ ಸರ್ಕಾರದ ಅನುದಾಯಕ್ಕಾಗಿ ಕಾಯದೆ ದಾನಿಗಳಿಂದ ಹಣ ಸಂಗ್ರಹಿಸಿ ಜನರಿಗೆ ನೀರು ಸಿಗುವಂತೆ ಮಾಡಿದ್ದೇವೆ’ ಎಂದು ಹುಸ್ಕೂರು ಗ್ರಾಮ ಪಂಚಾಯತಿ ಅಧ್ಯಕ್ಷ ಜಿ. ಸೋಮಶೇಖರ್ ಹೇಳಿದರು.

ಹೆಸರಘಟ್ಟ ಸಮೀಪದ ತೊರೆನಾಗಚಂದ್ರ ಗ್ರಾಮದಲ್ಲಿ ನಿರ್ಮಾಣವಾಗುತ್ತಿರುವ ಒಳಚರಂಡಿ ಮತ್ತು ರಸ್ತೆ ಕಾಮಗಾರಿ ಪರಿಶೀಲನೆ ನಡೆಸಿ ಮಾತನಾಡಿದರು.

ADVERTISEMENT

‘ತೊರೆನಾಗ ಚಂದ್ರದಲ್ಲಿ ಒಳ ಚರಂಡಿ ವ್ಯವಸ್ಥೆ ಇರಲಿಲ್ಲ. ಮಳೆಗಾಲದಲ್ಲಿ ಕೊಳಚೆ ನೀರು ಮನೆಗಳಿಗೆ ಹರಿದು ಬರುತ್ತಿತ್ತು. ಹಾಗಾಗಿ ₹10 ಲಕ್ಷ ವೆಚ್ಚದಲ್ಲಿ ಒಳ ಚರಂಡಿ ಕಾಮಗಾರಿ ಆರಂಭಿಸಿದ್ದೇವೆ’ ಎಂದರು.

ರಾಮಜೀಪಾಳ್ಯದ ಗ್ರಾಮದಲ್ಲಿ ಕಾಂಕ್ರೀಟ್ ರಸ್ತೆ ನಿರ್ಮಾಣಕ್ಕೆ ₹6 ಲಕ್ಷ, ಸಂಸದ ವೀರಪ್ಪ ಮೊಯ್ಲಿ ಅನುದಾನದಿಂದ ₹8 ಲಕ್ಷಗಳಲ್ಲಿ ಅರಳೀ
ಕಟ್ಟೆಯನ್ನು ಅಭಿವೃದ್ಧಿಪಡಿಸಲಾಗುತ್ತಿದ್ದು, ಎಲ್ಲ ಕಾಮಗಾರಿಗಳು ಪ್ರಗತಿಯಲ್ಲಿವೆ’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.