ADVERTISEMENT

ಎಂಬಿಎ ಪ್ರವೇಶಕ್ಕೆ `ಸಿಮ್ಯಾಟ್' ಪರೀಕ್ಷೆ

​ಪ್ರಜಾವಾಣಿ ವಾರ್ತೆ
Published 5 ಏಪ್ರಿಲ್ 2013, 19:26 IST
Last Updated 5 ಏಪ್ರಿಲ್ 2013, 19:26 IST

ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯದಲ್ಲಿ 2013-14ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಸಾಮಾನ್ಯ ಆಡಳಿತ ನಿರ್ವಹಣೆ ಪ್ರವೇಶ ಪರೀಕ್ಷೆ (ಸಿಮ್ಯಾಟ್)ಯಲ್ಲಿ ಗಳಿಸಿದ ಅಂಕದ ಆಧಾರದಲ್ಲಿ ಎಂಬಿಎ ಪದವಿಗೆ ಪ್ರವೇಶ ಅವಕಾಶ ಕಲ್ಪಿಸಲಾಗುವುದು.

ಅಖಿಲ ಭಾರತ ತಾಂತ್ರಿಕ ಶಿಕ್ಷಣ ಪರಿಷತ್ತಿನ (ಎಐಸಿಟಿಇ) ಮಾನ್ಯತೆ ಪಡೆದ ವಿವಿಯ ವಿಭಾಗಗಳು, ಶಿಕ್ಷಣ ಸಂಸ್ಥೆಗಳಲ್ಲಿ ಎಂಬಿಎ ಪ್ರವೇಶವನ್ನು ಸಿಮ್ಯಾಟ್ ಪರೀಕ್ಷೆಯ ಮೂಲಕ ನೀಡಬೇಕು ಎಂದು ರಾಜ್ಯ ಸರ್ಕಾರಕ್ಕೆ ಎಐಸಿಟಿಇ ಸೂಚಿಸಿದೆ.

ಸಿಮ್ಯಾಟ್ ಪರೀಕ್ಷೆಯಲ್ಲಿ ಗಳಿಸಿದ ಎರಡು ಅತ್ಯುತ್ತಮ ಅಂಕಗಳ ಆಧಾರದಲ್ಲಿ ಪ್ರವೇಶ ನೀಡಲಾಗುವುದು. ಈ ಹಿಂದೆ ನಡೆದ ಪರೀಕ್ಷೆಯಲ್ಲಿ ಭಾಗವಹಿಸದ ಅಭ್ಯರ್ಥಿಗಳು ಮೇ ತಿಂಗಳಲ್ಲಿ ನಡೆಯುವ ಪರೀಕ್ಷೆಯಲ್ಲಿ ಹಾಜರಾಗಬೇಕು. ಆನ್‌ಲೈನ್ ಮೂಲಕ ಹೆಸರು ನೋಂದಣಿ ಮಾಡಿಕೊಳ್ಳಬಹುದು.

ಎಂಬಿಎ ಪದವಿಗೆ ಮೆರಿಟ್ ಪಟ್ಟಿಯಲ್ಲಿ ಸರ್ಕಾರಿ ಕೋಟಾದ ಸೀಟುಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪ್ರವೇಶ ಪ್ರಕ್ರಿಯೆಯನ್ನು ನಡೆಸಲಿದೆ.
ತಮ್ಮ ಕೋಟಾಕ್ಕೆ ಮೀಸಲಾದ ಸೀಟುಗಳ ಪ್ರವೇಶ ಪ್ರಕ್ರಿಯೆಯನ್ನು ಆಯಾ ಶಿಕ್ಷಣ ಸಂಸ್ಥೆಗಳು ನಡೆಸಲಿವೆ.

ಬೆಂಗಳೂರು ವಿವಿ ಸಂಯೋಜನೆಗೆ ಒಳಪಟ್ಟ ಕಾಲೇಜುಗಳಲ್ಲಿ ಸಿಮ್ಯಾಟ್ ಮೂಲಕವೇ ದಾಖಲಾತಿ ಪ್ರಕ್ರಿಯೆ ನಡೆಸಬೇಕು ಎಂದು ವಿವಿ ಕುಲಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.