ADVERTISEMENT

ಎಚ್.ಸಿ.ಶ್ರೀಕಂಠಯ್ಯ ಅಂತ್ಯಕ್ರಿಯೆ

​ಪ್ರಜಾವಾಣಿ ವಾರ್ತೆ
Published 13 ಮಾರ್ಚ್ 2011, 19:30 IST
Last Updated 13 ಮಾರ್ಚ್ 2011, 19:30 IST


ಹಾಸನ: ಮಾಜಿ ಸಚಿವ ಎಚ್.ಸಿ. ಶ್ರೀಕಂಠಯ್ಯ ಅವರ ಅಂತ್ಯಸಂಸ್ಕಾರವು ಸಕಲ ಸರ್ಕಾರಿ ಗೌರವಗಳೊಂದಿಗೆ ಹುಟ್ಟೂರು ಹಿರೀಸಾವೆಯಲ್ಲಿ ಭಾನುವಾರ ನೆರವೇರಿತು.ಆದಿಚುಂಚನಗಿರಿ ಶಾಖಾ ಮಠದ ಶಂಭುನಾಥ ಸ್ವಾಮೀಜಿ ಅವರು ಶ್ರೀಕಂಠಯ್ಯ ಅವರ ಪುತ್ರರಿಗೆ ಧಾರ್ಮಿಕ ವಿಧಿ ಬೋಧಿಸಿದರು. ಬಳಿಕ ಸಾವಿರಾರು ಜನರ ಸಮ್ಮುಖದಲ್ಲಿ ಅಂತಿಮ ಸಂಸ್ಕಾರ ನೆರವೇರಿತು.

ಇದಕ್ಕೂ ಮುನ್ನ ಚನ್ನರಾಯಪಟ್ಟಣದಲ್ಲಿ ಪಾರ್ಥಿವ ಶರೀರವನ್ನು ಮೆರವಣಿಗೆ ನಡೆಸಿ ಹಿರೀಸಾವೆಗೆ ಸಾಗಿಸಲಾಯಿತು. ಬೆಳಿಗ್ಗೆ ಹಾಸನ ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ, ಶಾಸಕರಾದ ಸಿ.ಎಸ್.ಪುಟ್ಟೇಗೌಡ,   ಕೆ.ಎಂ.ಶಿವಲಿಂಗೇಗೌಡ ಹಾಗೂ ಇತರ ಪ್ರಮುಖರು ಅಂತಿಮ ದರ್ಶನ ಪಡೆದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.