
ಪ್ರಜಾವಾಣಿ ವಾರ್ತೆಬೆಂಗಳೂರು: ನಗರದ ಎಚ್‌ಎಸ್‌ಆರ್ ಲೇಔಟ್ ಏಳನೇ ಸೆಕ್ಟರ್‌ನಲ್ಲಿ ಅನಧಿಕೃತವಾಗಿ ನಿರ್ಮಿಸಿದ್ದ ತಾತ್ಕಾಲಿಕ ಶೆಡ್ ಅನ್ನು ಸೋಮವಾರ ತೆರವುಗೊಳಿಸಿದ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ (ಬಿಡಿಎ) ಸಿಬ್ಬಂದಿ ಸುಮಾರು ಆರು ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ವಶಪಡಿಸಿಕೊಂಡಿದ್ದಾರೆ.
ಎಚ್‌ಎಸ್‌ಆರ್ ಲೇಔಟ್ ಏಳನೇ ಸೆಕ್ಟರ್‌ನ ಸರ್ವೆ ನಂ 36 ಮತ್ತು 37ರಲ್ಲಿರುವ ಪ್ರಾಧಿಕಾರಕ್ಕೆ ಸೇರಿದ ಜಾಗದಲ್ಲಿ ಅಕ್ರಮವಾಗಿ ನಿರ್ಮಿಸಿದ್ದ ಶೆಡ್ ಮತ್ತು ಕಾಂಪೌಂಡ್ ಅನ್ನು ತೆರವುಗೊಳಿಸಿ ಏಳು ಗುಂಟೆ ಜಮೀನನ್ನು ವಶಪಡಿಸಿಕೊಳ್ಳಲಾಗಿದೆ.
ಆ ಜಮೀನಿನ ಮಾರುಕಟ್ಟೆ ಮೌಲ್ಯ ಸುಮಾರು ಆರು ಕೋಟಿ ರೂಪಾಯಿ ಎಂದು ಬಿಡಿಎ ಅಧಿಕಾರಿಗಳು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.