ADVERTISEMENT

ಎಚ್‌ಐವಿ ಸೋಂಕಿತರಿಗೆ ಮಾನಸಿಕ ಸ್ಥೈರ್ಯ ತುಂಬಿ

​ಪ್ರಜಾವಾಣಿ ವಾರ್ತೆ
Published 23 ಮಾರ್ಚ್ 2014, 19:47 IST
Last Updated 23 ಮಾರ್ಚ್ 2014, 19:47 IST
ಕರ್ನಾಟಕ ರಾಜ್ಯ ಎಚ್‌.ಐ.ವಿ. ಸೋಂಕಿತರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ನಗರದಲ್ಲಿ ಭಾನುವಾರ ಏರ್ಪಡಿಸಿದ್ದ 5ನೇ ಸದ್ಭಾವನಾ  ಸಮ್ಮಿಲನ ಕಾರ್ಯಕ್ರಮದಲ್ಲಿ ವಿಕ್ಟೋರಿಯಾ ಆಸ್ಪತ್ರೆಯ ಹಿರಿಯ ವೈದ್ಯಾಧಿಕಾರಿ ಡಾ.ಎಂ.ತಿಮ್ಮಪ್ಪರೆಡ್ಡಿ ಅವರು ಸಾರ್ವಜನಿಕರೊಂದಿಗೆ ಸಮಾಲೋಚನೆ ನಡೆಸಿದರು
ಕರ್ನಾಟಕ ರಾಜ್ಯ ಎಚ್‌.ಐ.ವಿ. ಸೋಂಕಿತರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ನಗರದಲ್ಲಿ ಭಾನುವಾರ ಏರ್ಪಡಿಸಿದ್ದ 5ನೇ ಸದ್ಭಾವನಾ ಸಮ್ಮಿಲನ ಕಾರ್ಯಕ್ರಮದಲ್ಲಿ ವಿಕ್ಟೋರಿಯಾ ಆಸ್ಪತ್ರೆಯ ಹಿರಿಯ ವೈದ್ಯಾಧಿಕಾರಿ ಡಾ.ಎಂ.ತಿಮ್ಮಪ್ಪರೆಡ್ಡಿ ಅವರು ಸಾರ್ವಜನಿಕರೊಂದಿಗೆ ಸಮಾಲೋಚನೆ ನಡೆಸಿದರು   

ಬೆಂಗಳೂರು: ‘ಎಚ್‌ಐವಿ ಸೋಂಕಿತರಿಗೆ ಮಾನಸಿಕ ಸ್ಥೈರ್ಯ ತುಂಬಬೇಕಾದ ಅಗತ್ಯವಿದೆ’ ಎಂದು ವಿಕ್ಟೋರಿಯಾ ಆಸ್ಪತ್ರೆಯ ಹಿರಿಯ ವೈದ್ಯಾಧಿಕಾರಿ ಡಾ.ಎಂ.ತಿಮ್ಮಪ್ಪರೆಡ್ಡಿ ಹೇಳಿದರು. 

ಕರ್ನಾಟಕ ರಾಜ್ಯ ಎಚ್‌ಐವಿ ಸೋಂಕಿ­ತರ ಕ್ಷೇಮಾಭಿವೃದ್ಧಿ ಸಂಘದ ವತಿ­ಯಿಂದ ನಗರದಲ್ಲಿ ಭಾನುವಾರ ಏರ್ಪಡಿಸಿದ್ದ  5ನೇ  ಸದ್ಭಾವನ ಸಮ್ಮಿಲನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಎಚ್‌ಐವಿ ಸೋಂಕು ತಗುಲಿದೆ ಎಂದು ತಿಳಿದ ನಂತರ ಸೋಂಕಿತರು ಮಾನಸಿಕವಾಗಿ ಕುಗ್ಗುತ್ತಾರೆ. ಆದ್ದ­ರಿಂದ ಕುಟುಂಬದ ಸದಸ್ಯರು ಅವರಲ್ಲಿ ಧೈರ್ಯ ತುಂಬಬೇಕು. ಸಮಾಜದಲ್ಲಿ ಅವರನ್ನು ಸಹಜ ವ್ಯಕ್ತಿಗಳಂತೆ ಕಾಣಬೇಕು ಎಂದು ಹೇಳಿದರು.

ಸಂಘದ ಅಧ್ಯಕ್ಷ ವಿ.ಎ.ನಾಗರಾಜು ಮಾತನಾಡಿ, ಎಚ್‌ಐವಿ ಸೋಂಕಿತರಿಗೆ ಎಆರ್‌ಟಿ ಸೆಂಟರ್‌ನಲ್ಲಿ ಪೌಷ್ಟಿಕ ಆಹಾರ ನೀಡಬೇಕು. ಆಸ್ಪತ್ರೆ ಗಳಲ್ಲಿ ದಾಖಲಾಗುವ ರೋಗಿಗಳಿಗೆ ಉಚಿತ ಔಷಧಿಗಳನ್ನು ವಿತರಿಸಬೇಕು ಎಂದರು.

ಸ್ವ–ಉದ್ಯೋಗ ಮಾಡಲು ಇಚ್ಛಿ­ಸುವವರಿಗೆ ₨1 ಲಕ್ಷ ಸಾಲ ನೀಡಬೇಕು. ಸೋಂಕಿತರ ಮಕ್ಕಳ ವಿದ್ಯಾಭ್ಯಾಸಕ್ಕೆ ವಿಶೇಷ ಅನುದಾನ ಬಿಡುಗಡೆ ಮಾಡ­ಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಲು ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾ­ಗುವುದು ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.