ADVERTISEMENT

ಎಚ್1ಎನ್1: ಮಹಿಳೆ ಸಾವು

​ಪ್ರಜಾವಾಣಿ ವಾರ್ತೆ
Published 12 ಏಪ್ರಿಲ್ 2012, 19:30 IST
Last Updated 12 ಏಪ್ರಿಲ್ 2012, 19:30 IST

ದಾವಣಗೆರೆ: ಜಿಲ್ಲೆಯಲ್ಲಿ ಎಚ್1ಎನ್1 ಸೋಂಕು ಕಾಣಿಸಿಕೊಂಡಿದ್ದು, ಈಚೆಗೆ ಅದು ಮಹಿಳೆಯೊಬ್ಬರನ್ನು ಬಲಿ ತೆಗೆದುಕೊಂಡಿದೆ.

ನಗರದ ಬಾಪೂಜಿ ಆಸ್ಪತ್ರೆಯಲ್ಲಿ ಏ. 8ರಂದು ವಿನೋಬನಗರದ 45 ವರ್ಷದ ಮಹಿಳೆ ಮೃತಪಟ್ಟಿದ್ದು, ಅವರ ರಕ್ತ ಮಾದರಿಯನ್ನು ಪರೀಕ್ಷೆಗೆ ಕಳುಹಿಸಲಾಗಿತ್ತು. ಏ. 10ರಂದು ವರದಿ ಬಂದಿದ್ದು ಎಚ್1ಎನ್1 ಸೋಂಕಿನಿಂದ ಮೃತಪಟ್ಟಿರುವುದು ದೃಢಪಟ್ಟಿದೆ ಎಂದು ಮೂಲಗಳು ತಿಳಿಸಿವೆ.

ಹೊನ್ನಾಳಿ ತಾಲ್ಲೂಕಿನ ಹೆತ್ತೂರು ಗ್ರಾಮದ 16 ವರ್ಷದ ಬಾಲಕಿಗೂ ಈ ಸೋಂಕು ಕಾಣಿಸಿಕೊಂಡಿದೆ. ಅವರಿಗೆ ಸೂಕ್ತ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಸುಮಿತ್ರಾ ದೇವಿ `ಪ್ರಜಾವಾಣಿ~ಗೆ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.